ಕೊಲೆ ಯತ್ನ: ಕ್ರೈಂ ಬ್ರಾಂಚ್ ಪೊಲೀಸರಿಂದ ಕೇರಳ ಕಾಂಗ್ರೆಸ್ ಶಾಸಕ ಎಲ್ದೋಸ್ ಕುನ್ನಪಿಲ್ಲಿ ಬಂಧನ!
ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ಎಲ್ದೋಸ್ ಕುನ್ನಪಿಲ್ಲಿಲ್ ವಿರುದ್ಧ ಇದೀಗ ಕ್ರೈಂ ಬ್ರಾಂಚ್ ಪೊಲೀಸರು ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿದ್ದಾರೆ.

ತಿರುವನಂತಪುರಂ: ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ಎಲ್ದೋಸ್ ಕುನ್ನಪಿಲ್ಲಿ ವಿರುದ್ಧ ಇದೀಗ ಕ್ರೈಂ ಬ್ರಾಂಚ್ ಪೊಲೀಸರು ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಪೆರುಂಬವೂರು ಶಾಸಕ 44 ವರ್ಷದ ಎಲ್ದೋಸ್ ಕುನ್ನಪಿಲ್ಲಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನಾಳೆ ಪ್ರಕಟಿಸುವ ನಿರೀಕ್ಷೆಯಿದೆ. ಇದರ ಮಧ್ಯೆ ಅಪರಾಧ ವಿಭಾಗವು ಅವರ ವಿರುದ್ಧ ಕೊಲೆ ಯತ್ನದ ಗಂಭೀರ ಆರೋಪ ಹೊರಿಸಿದೆ.
ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಿರುವ ಹೇಳಿಕೆ ಹಾಗೂ ಆಕೆಯ ಬಳಿ ಇದ್ದ ಸಾಕ್ಷ್ಯಗಳ ಆಧಾರದ ಮೇಲೆ ತಲೆಮರೆಸಿಕೊಂಡಿರುವ ಶಾಸಕನ ವಿರುದ್ಧ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಆರೋಪವನ್ನು ಸೇರಿಸಲಾಗಿದೆ ಎಂದು ಕ್ರೈಂ ಬ್ರಾಂಚ್ ಮೂಲಗಳು ತಿಳಿಸಿವೆ.
ಕೋವಲಂನ ಆತ್ಮಹತ್ಯೆ ಸ್ಥಳದಲ್ಲಿ ತನ್ನನ್ನು ತಳ್ಳಿ ಕೊಲೆ ಮಾಡಲು ಶಾಸಕರು ಯತ್ನಿಸಿದ್ದರು ಎಂದು ಮಹಿಳೆ ಆರೋಪಿಸಿದ್ದಾಳೆ. ಮ್ಯಾಜಿಸ್ಟ್ರೇಟ್ ಮುಂದೆ ಆಕೆ ಈ ಹೇಳಿಕೆ ನೀಡಿದ್ದು, ಇವುಗಳ ಆಧಾರದ ಮೇಲೆ ಹೊಸ ಐಪಿಸಿ ಸೆಕ್ಷನ್ ಅಡಿಯಲ್ಲಿ ಶಾಸಕರ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಕ್ರೈಂ ಬ್ರಾಂಚ್ ಪೊಲೀಸರು ಕೋವಲಂನಲ್ಲಿರುವ ಅತಿಥಿ ಗೃಹದಿಂದ ಪುರಾವೆಗಳನ್ನು ಸಂಗ್ರಹಿಸಿದ್ದಾರೆ. ಅಲ್ಲಿ ದೂರುದಾರರಾದ ಖಾಸಗಿ ಶಾಲೆಯ ಶಿಕ್ಷಕಿ ತಾವು ಒಮ್ಮೆ ಅತ್ಯಾಚಾರಕ್ಕೊಳಗಾಗಿದ್ದಾಗಿ ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


