ದೇಶ

ದೆಹಲಿ: ಪ್ರತ್ಯೇಕ ಘಟನೆಗಳಲ್ಲಿ ತಲೆ ನುಜ್ಜುಗುಜ್ಜಾದ 2 ಮೃತದೇಹಗಳು ಪತ್ತೆ

ದೆಹಲಿಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ತಲೆ ನುಜ್ಜುಗುಜ್ಜಾಗಿರುವ ಮತ್ತು ಹಲವು ಗಾಯಗಳಾಗಿರುವ ಎರಡು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ದೆಹಲಿ: ಪ್ರತ್ಯೇಕ ಘಟನೆಗಳಲ್ಲಿ ತಲೆ ನುಜ್ಜುಗುಜ್ಜಾದ 2 ಮೃತದೇಹಗಳು ಪತ್ತೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಇಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ತಲೆ ನುಜ್ಜುಗುಜ್ಜಾಗಿರುವ ಮತ್ತು ಹಲವು ಗಾಯಗಳಾಗಿರುವ ಎರಡು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮೊದಲ ಪ್ರಕರಣದಲ್ಲಿ ಮೃತದೇಹ ದಕ್ಷಿಣ ದೆಹಲಿಯ ಸಿಆರ್ ಪಾರ್ಕ್ ಪ್ರದೇಶದ ಹೊರ ವರ್ತುಲ ರಸ್ತೆಯಲ್ಲಿ ಪತ್ತೆಯಾಗಿದೆ. ಇದು ಅಪಘಾತ ಪ್ರಕರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
3 ಗಂಟೆಗೆ ಸುಮಾರು 40 ವರ್ಷದ ವ್ಯಕ್ತಿಯ ಮೃತದೇಹದ ಬಗ್ಗೆ ಕಂಟ್ರೋಲ್ ರೂಂಗೆ ಕರೆ ಬಂದಿತ್ತು ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ಹೇಳಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ದಕ್ಷಿಣ ದೆಹಲಿಯ ಫತೇಪುರ್ ಬೆರಿ ಪ್ರದೇಶದ ಜೌನಾಪುರ್ ಗ್ರಾಮದಲ್ಲಿ 30 ರಿಂದ 35 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದೆ.

ಆತನ ಜೇಬಿನಿಂದ ಪತ್ತೆಯಾದ ಕಾರ್ಮಿಕ ಹಾಜರಾತಿ ಕಾರ್ಡ್ ಆತನನ್ನು ಪ್ರದೀಪ್ ಎಂದು ಗುರುತಿಸಿದೆ. ಆತನ ಬಲಗೈ ಮೇಲೆ 'ಬೇಬಿ' ಎಂಬ ಹಚ್ಚೆ ಇದೆ. ಇದು ಕೂಡ ಹಿಟ್ ಅಂಡ್ ಪ್ರಕರಣ ಎಂದು ತೋರುತ್ತದೆ ಡಿಸಿಪಿ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ಸಾರ್ವಜನಿಕ ಮಾರ್ಗದಲ್ಲಿ ಅತ್ಯಾತುರವಾಗಿ ಚಾಲನೆ ಮಾಡುವುದು ಅಥವಾ ಸವಾರಿ ಮಾಡುವುದು) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.