ಕುತೂಹಲ ಘಟ್ಟ ತಲುಪಿದ ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಮತ ಎಣಿಕೆ ಆರಂಭ; ಖರ್ಗೆಗೆ ಒಲಿಯುತ್ತಾಳಾ ವಿಜಯಲಕ್ಷ್ಮಿ!
ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. ಅದರೊಂದಿಗೆ 137 ವರ್ಷದ ಇತಿಹಾಸವಿರುವ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷಕ್ಕೆ 24 ವರ್ಷಗಳ ನಂತರ ಗಾಂಧಿಯೇತರ ಅಧ್ಯಕ್ಷರೊಬ್ಬರು ಲಭಿಸಲಿದ್ದಾರೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. ಅದರೊಂದಿಗೆ 137 ವರ್ಷದ ಇತಿಹಾಸವಿರುವ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷಕ್ಕೆ 24 ವರ್ಷಗಳ ನಂತರ ಗಾಂಧಿಯೇತರ ಅಧ್ಯಕ್ಷರೊಬ್ಬರು ಲಭಿಸಲಿದ್ದಾರೆ.
ಅವರು ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆಯೋ ಅಥವಾ ಕೇರಳದ ಶಶಿ ತರೂರ್ ಅವರೋ ಎಂಬುದು ಮತ ಎಣಿಕೆಯ ನಂತರ ತಿಳಿಯಲಿದೆ.
ದೇಶಾದ್ಯಂತ ಸ್ಥಾಪಿಸಲಾಗಿದ್ದ 68 ಮತಗಟ್ಟೆಗಳಿಂದ ಮತ ಪೆಟ್ಟಿಗೆಗಳನ್ನು ದೆಹಲಿಗೆ ತರುವ ಕಾರ್ಯ ಮಂಗಳವಾರ ಸಂಜೆಗೆ ಪೂರ್ಣಗೊಂಡಿದೆ. ಬೆಳಗ್ಗೆ 10 ಗಂಟೆಯಿಂದ ಮತಎಣಿಕೆ ಕಾರ್ಯ ಆರಂಭವಾಗಿದೆ.
ಗಾಂಧಿ ಕುಟುಂಬಕ್ಕೆ ಹತ್ತಿರುವಿರುವ ಹಾಗೂ ಪಕ್ಷದಲ್ಲಿ ಹೆಚ್ಚು ಬೆಂಬಲ ಹೊಂದಿರುವ ಖರ್ಗೆ ಅವರೇ ಜಯ ಗಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿ ಚುನಾವಣೆ ನಡೆದಿದೆ. ಹಾಗೆಯೇ 22 ವರ್ಷಗಳ ಬಳಿಕ ನೆಹರೂ-ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಸಿಗಲಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ 96ರಷ್ಟು ಮತದಾನವಾಗಿತ್ತು. 9,915 ಪ್ರತಿನಿಧಿಗಳ ಪೈಕಿ 9,500 ಪ್ರತಿನಿಧಿಗಳು ತಮ್ಮ ಹಕ್ಕು ಚಲಾಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


