ಮಲ್ಲಿಕಾರ್ಜುನ ಖರ್ಗೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶುಭಾಶಯ ತಿಳಿಸಿದ್ದಾರೆ.

ನವದೆಹಲಿ: ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶುಭಾಶಯ ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಳೆದ ಸೋಮವಾರ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಮಲ್ಲಿಕಾರ್ಜುನ್ ಖರ್ಗೆ ಅವರು ಪ್ರತಿಸ್ಪರ್ಧಿ ಶಶಿ ತರೂರ್ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವ ಖರ್ಗೆ ಅವರಿಗೆ ಪ್ರಧಾನಿ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
“ಕಾಂಗ್ರೆಸ್ ಅಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವ ಮಲ್ಲಿಕಾರ್ಜುನ ಖರ್ಗೆ ಜೀ ಅವರಿಗೆ ನನ್ನ ಶುಭಾಶಯಗಳು. ಮುಂದೆ ನೀವು ಫಲಪ್ರದವಾದ ಅಧಿಕಾರಾವಧಿಯನ್ನು ಪೂರೈಸಿ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


