ಗಾಜಿಯಾಬಾದ್ ಸಾಮೂಹಿಕ ಅತ್ಯಾಚಾರ: ಪ್ರಕರಣದ ತನಿಖೆಗಾಗಿ ಸತ್ಯಶೋಧನಾ ತಂಡ ರಚಿಸಿದ ಮಹಿಳಾ ಆಯೋಗ
ಗಾಜಿಯಾಬಾದ್‌ನಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗವು ಇಬ್ಬರು ಸದಸ್ಯರ ಸತ್ಯಶೋಧನಾ ತಂಡವನ್ನು ಕಳುಹಿಸಲಿದೆ.

ನವದೆಹಲಿ: ಗಾಜಿಯಾಬಾದ್‌ನಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗವು ಇಬ್ಬರು ಸದಸ್ಯರ ಸತ್ಯಶೋಧನಾ ತಂಡವನ್ನು ಕಳುಹಿಸಲಿದೆ.
ಮಾಧ್ಯಮದ ವರದಿಗಳ ಪ್ರಕಾರ, ದೆಹಲಿಯಲ್ಲಿ ಮನೆಗೆ ಮರಳಲು ಆಟೋ ರಿಕ್ಷಾಕ್ಕಾಗಿ ಕಾಯುತ್ತಿದ್ದ 38 ವರ್ಷದ ಮಹಿಳೆಯನ್ನು ಗಾಜಿಯಾಬಾದ್ ರಾಜ್‌ನಗರ ಎಕ್ಸ್‌ಟೆನ್ಶನ್‌ನ ಆಸ್ರಮ ರಸ್ತೆಯಲ್ಲಿ ಗನ್‌ಪಾಯಿಂಟ್‌ನಿಂದ ಅಪಹರಿಸಲಾಗಿದೆ. ಅಲ್ಲಿ ಆಕೆಯನ್ನು ಎರಡು ದಿನಗಳ ಕಾಲ ಸೆರೆಯಲ್ಲಿಟ್ಟು, ಐವರು ಅತ್ಯಾಚಾರ ಎಸಗಿದ್ದರು ಎಂದು ವರದಿಯಾಗಿತ್ತು.
ಈ ಕುರಿತು ಟ್ವೀಟ್ ಮಾಡಿರುವ ಮಹಿಳಾ ಆಯೋಗ, 'ಮಹಿಳಾ ಆಯೋಗವು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿದೆ ಮತ್ತು ಸಂತ್ರಸ್ತೆಯ ಕುಟುಂಬ ಹಾಗೂ ಸಂಬಂಧಿತ ಅಧಿಕಾರಿಗಳನ್ನು ಭೇಟಿ ಮಾಡಲು ಇಬ್ಬರು ಸದಸ್ಯರನ್ನೊಳಗೊಂಡ ಸತ್ಯಶೋಧನಾ ತಂಡವನ್ನು ಕಳುಹಿಸಲಾಗುತ್ತಿದೆ' ಎಂದು ಹೇಳಿದೆ.
ಇದಕ್ಕೂ ಮುನ್ನ, 38 ವರ್ಷದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಹತ್ಯೆಯನ್ನು ನೆನಪಿಸುತ್ತಿದೆ ಎಂದಿದ್ದ ಮಹಿಳಾ ಆಯೋಗ, ಈ ಸಂಬಂಧ ಗಾಜಿಯಾಬಾದ್ ಎಸ್‌ಪಿಗೆ ನೋಟಿಸ್ ಜಾರಿಗೊಳಿಸಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಂಡ ವರದಿ ಮತ್ತು ಎಫ್‌ಐಆರ್ ಪ್ರತಿಯೊಂದಿಗೆ ಇನ್ನಿತರ ದಾಖಲೆ ಒದಗಿಸುವಂತೆ ಕೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


