ದೇಶ

'ಯಾರೂ ಜವಾಬ್ದಾರರಲ್ಲ, ತನಿಖೆ ಅಗತ್ಯವಿಲ್ಲ': ಮುಂಬೈನಲ್ಲಿ ಕಟ್ಟಡದ 23ನೇ ಮಹಡಿಯಿಂದ ಜಿಗಿದು ಬಿಲ್ಡರ್ ಆತ್ಮಹತ್ಯೆ

ಖ್ಯಾತ ರಿಯಲ್ ಎಸ್ಟೇಟ್ ಡೆವಲಪರ್ ಪರಸ್ ಪೋರ್ವಾಲ್ ಅವರು ಗುರುವಾರ ಮುಂಬೈನ ಕಟ್ಟಡದ 23ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಯಾರೂ ಜವಾಬ್ದಾರರಲ್ಲ, ತನಿಖೆ ಅಗತ್ಯವಿಲ್ಲ': ಮುಂಬೈನಲ್ಲಿ ಕಟ್ಟಡದ 23ನೇ ಮಹಡಿಯಿಂದ ಜಿಗಿದು ಬಿಲ್ಡರ್ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :

ಮುಂಬೈ: ಖ್ಯಾತ ರಿಯಲ್ ಎಸ್ಟೇಟ್ ಡೆವಲಪರ್ ಪರಸ್ ಪೋರ್ವಾಲ್ ಅವರು ಗುರುವಾರ ಮುಂಬೈನ ಕಟ್ಟಡದ 23ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಂತರ ಪೊಲೀಸರಿಗೆ ಜಿಮ್‌ನಲ್ಲಿ  57 ವರ್ಷದ ಬಿಲ್ಡರ್‌ನ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ತಮ್ಮ ಸಾವಿಗೆ ಯಾರೂ ಕಾರಣರಲ್ಲ ಮತ್ತು ಯಾರನ್ನೂ ವಿಚಾರಣೆಗೆ ಒಳಪಡಿಸಬಾರದು ಎಂದು ನಮೂದಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೋರ್ವಾಲ್ ಅವರು ಚಿಂಚಪೋಕ್ಲಿ ರೈಲ್ವೆ ನಿಲ್ದಾಣದ ಬಳಿಯ ಶಾಂತಿ ಕಮಲ್ ಹೌಸಿಂಗ್ ಸೊಸೈಟಿಯಲ್ಲಿನ ಕಟ್ಟಡದಲ್ಲಿರುವ ತಮ್ಮ ನಿವಾಸದ ಜಿಮ್‌ನ ಬಾಲ್ಕನಿಯಿಂದ ಬೆಳಿಗ್ಗೆ 6 ಗಂಟೆ ಸುಮಾರಿಗೆ ಜಿಗಿದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕಾಳಾಚೌಕಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅವರು ಹೇಳಿದರು.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಆತ್ಮಹತ್ಯೆ ಹಿಂದಿನ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.