ಉತ್ತರ ಪ್ರದೇಶ: ಶಾಲೆಯಿಂದ ಮನೆಗೆ ಮರಳುತ್ತಿದ್ದ ವೇಳೆ ಮಣ್ಣಿನ ಗುಡ್ಡ ಕುಸಿದು ಮೂವರು ಮಕ್ಕಳು ಸಾವು
ಬುಧವಾರ ಮಕ್ಕಳು ಶಾಲೆಯಿಂದ ತಮ್ಮ ಮನೆಗೆ ಮರಳುವಾಗ ಗುಡ್ಡದ ಮೂಲಕ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಲಖನೌ: ಇಲ್ಲಿನ ಫಕೀರಪುರ ಗ್ರಾಮದಲ್ಲಿ ಮಣ್ಣಿನ ಗುಡ್ಡ ಕುಸಿದು ಮೂವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬುಧವಾರ ಮಕ್ಕಳು ಶಾಲೆಯಿಂದ ತಮ್ಮ ಮನೆಗೆ ಮರಳುವಾಗ ಗುಡ್ಡದ ಮೂಲಕ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಮೃತರನ್ನು ಸಚಿನ್ (12), ಗೋವಿಂದ್ (13), ಕೌಶಲ್ (13) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಜೆಯಾದರೂ ಮಕ್ಕಳು ಮನೆಗೆ ಬಾರದೇ ಇದ್ದುದರಿಂದ ಅವರ ಮನೆಯವರು ಹುಡುಕಾಟ ನಡೆಸಿದಾಗ ಮೂವರೂ ಮಣ್ಣಿನಲ್ಲಿ ಹೂತು ಹೋಗಿರುವುದು ಕಂಡು ಬಂದಿದೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


