ದೇಶ

ಗ್ಯಾಂಗ್ ರೇಪ್ ವಿಷಯದಲ್ಲಿ ಸುಳ್ಳು ಕಥೆ ಕಟ್ಟಿದ್ದ ಮಹಿಳೆ ಬಂಧನ!

ತನ್ನನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ, ಕಥೆ ಕಟ್ಟಿದ್ದ ಮಹಿಳೆಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಗ್ಯಾಂಗ್ ರೇಪ್ ವಿಷಯದಲ್ಲಿ ಸುಳ್ಳು ಕಥೆ ಕಟ್ಟಿದ್ದ ಮಹಿಳೆ ಬಂಧನ!
ಅತ್ಯಾಚಾರ (ಸಂಗ್ರಹ ಚಿತ್ರ)
Published On :

ನವದೆಹಲಿ: ತನ್ನನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ, ಕಥೆ ಕಟ್ಟಿದ್ದ ಮಹಿಳೆಯನ್ನು  ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. 

ಈ ಮಹಿಳೆಯೊಂದಿಗೆ ಸುಳ್ಳು ಆರೋಪ ದಾಖಲಿಸಲು ಸಹಾಯ ಮಾಡಿದ್ದ ಇತರ ಮೂವರು ಮಂದಿ ವಿರುದ್ಧವೂ ಐಪಿಸಿ ಸೆಕ್ಷನ್ 420 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಾಜಿಯಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ತನ್ನೊಂದಿಗೆ ಆಸ್ತಿ ವಿವಾದ ಎದುರಿಸುತ್ತಿದ್ದ ಐವರು ಪುರುಷರ ವಿರುದ್ಧ ಅತ್ಯಾಚಾರ ಎಸಗಿರುವ ಆರೋಪ ಮಾಡಿದ್ದಳು.

ಆದರೆ ತನಿಖೆಯಲ್ಲಿ ಸತ್ಯ ಬಯಲಾಗಿದ್ದು, ಮಹಿಳೆ ಹಾಗೂ ಆಕೆಯ ಸಹಚರರಾದ ಗೌರವ್, ಆಜಾದ್, ಅಫ್ಜಲ್ ಎಂಬ ಮೂವರು ವ್ಯಕ್ತಿಗಳನ್ನು ಬಂಧಿಸಿ ಕೋರ್ಟ್ ಎದುರು ಹಾಜರುಪಡಿಸಲಾಯಿತು. ಕೋರ್ಟ್ ಪ್ರಮುಖ ಆರೋಪಿ ಮಹಿಳೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 420, 467, 468, 417 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣದ ಬಗ್ಗೆ ಮೀರತ್‌ನ ಐಜಿ ಪ್ರವೀಣ್ ಕುಮಾರ್  ಮಾಹಿತಿ ಹಂಚಿಕೊಂಡಿದ್ದು, ಮಹಿಳೆ ಆಸ್ತಿ ವಿವಾದದಲ್ಲಿ ಆರೋಪಿಯನ್ನು ಸಿಲುಕಿಸಲು ಆಜಾದ್ ಎಂಬಾತನೊಂದಿಗೆ ಸೇರಿಕೊಂಡು ಸುಳ್ಳು ಆರೋಪ ಹೊರಿಸಿರುವುದು ತನಿಖೆ ವೇಳೆ ತಿಳಿದು ಬಂದಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.