ದೇಶ

ವಿದೇಶಿ ದೇಣಿಗೆ ಸಂಗ್ರಹದಲ್ಲಿ ಅಕ್ರಮ: ಸೋನಿಯಾ ಅಧ್ಯಕ್ಷತೆಯ ರಾಜೀವ್​ ಗಾಂಧಿ ಪ್ರತಿಷ್ಠಾನದ  ಲೈಸೆನ್ಸ್​ ರದ್ದು

ವಿದೇಶಗಳಿಂದ ದೇಣಿಗೆ ಸಂಗ್ರಹಿಸುವ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಜೀವ್​ ಗಾಂಧಿ ಫೌಂಡೇಶನ್​ ಸಂಸ್ಥೆಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ನೀಡಿದ್ದ ಲೈಸೆನ್ಸ್​ ಅನ್ನು ಕೇಂದ್ರ ಗೃಹ ಇಲಾಖೆಯು ರದ್ದುಪಡಿಸಿದೆ.

ವಿದೇಶಿ ದೇಣಿಗೆ ಸಂಗ್ರಹದಲ್ಲಿ ಅಕ್ರಮ: ಸೋನಿಯಾ ಅಧ್ಯಕ್ಷತೆಯ ರಾಜೀವ್​ ಗಾಂಧಿ ಪ್ರತಿಷ್ಠಾನದ  ಲೈಸೆನ್ಸ್​ ರದ್ದು
ರಾಜೀವ್​ ಗಾಂಧಿ ಫೌಂಡೇಶನ್
Published On :

ನವದೆಹಲಿ: ವಿದೇಶಗಳಿಂದ ದೇಣಿಗೆ ಸಂಗ್ರಹಿಸುವ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಜೀವ್​ ಗಾಂಧಿ ಫೌಂಡೇಶನ್​  ಸಂಸ್ಥೆಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ನೀಡಿದ್ದ ಲೈಸೆನ್ಸ್​ ಅನ್ನು ಕೇಂದ್ರ ಗೃಹ ಇಲಾಖೆಯು ರದ್ದುಪಡಿಸಿದೆ.

ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವ ಪ್ರಭಾವಿ ಮನೆತನವಾಗಿರುವ ಗಾಂಧಿ ಕುಟುಂಬದೊಂದಿಗೆ ಈ ಪ್ರತಿಷ್ಠಾನವು ನಿಕಟ ಸಂಬಂಧ ಹೊಂದಿದೆ. ಜುಲೈ 2020ರಲ್ಲಿ ಕೇಂದ್ರ ಗೃಹ ಇಲಾಖೆಯು ರಾಜೀವ್ ಗಾಂಧಿ ಪ್ರತಿಷ್ಠಾನದ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಿತ್ತು.

ಈ ಸಮಿತಿಯ ವರದಿಯನ್ನು ಆಧರಿಸಿ ಪ್ರತಿಷ್ಠಾನಕ್ಕೆ ನೀಡಿದ್ದ ಲೈಸೆನ್ಸ್ ರದ್ದುಪಡಿಸುವ ನಿರ್ಧಾರ ತೆಗೆದುಕೊಂಡಿದೆ. ಲೈಸೆನ್ಸ್​ ರದ್ದತಿ ಕುರಿತ ಮಾಹಿತಿಯನ್ನು ರಾಜೀವ್ ಗಾಂಧಿ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಕಳುಹಿಸಿಕೊಡಲಾಗಿದೆ.

ಕಾಂಗ್ರೆಸ್​ನ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ರಾಜೀವ್ ಗಾಂಧಿ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದು, ಟ್ರಸ್ಟ್​ನ ವಿಶ್ವಸ್ಥರಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಸಂಸದರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.