ದೇಶ

ದೀಪ ಬೆಳಗಿಸಿ, ಪಟಾಕಿ ಸಿಡಿಸಿ ಗಡಿಯಲ್ಲಿ ಬೆಳಕಿನ ಹಬ್ಬ ದೀಪಾವಳಿ ಆಚರಿಸಿದ ಯೋಧರು

ಜಮ್ಮು ಮತ್ತು ಕಾಶ್ಮೀರ ಅಖ್ನೂರ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಭಾರತೀಯ ಸೇನಾ ಯೋಧರು ಪಟಾಕಿ ಸಿಡಿಸಿ, ದೀಪಗಳನ್ನು ಬೆಳಗಿಸುವ ಮೂಲಕ ಬೆಳಕಿನ ಹಬ್ಬವನ್ನು ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದರು.

ದೀಪ ಬೆಳಗಿಸಿ, ಪಟಾಕಿ ಸಿಡಿಸಿ ಗಡಿಯಲ್ಲಿ ಬೆಳಕಿನ ಹಬ್ಬ ದೀಪಾವಳಿ ಆಚರಿಸಿದ ಯೋಧರು
ಗಡಿಯಲ್ಲಿ ದೀಪಾವಳಿ ಆಚರಿಸುತ್ತಿರುವ ಯೋಧರು.
Published On :

ಅಖ್ನೂರ್: ಜಮ್ಮು ಮತ್ತು ಕಾಶ್ಮೀರ ಅಖ್ನೂರ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಭಾರತೀಯ ಸೇನಾ ಯೋಧರು ಪಟಾಕಿ ಸಿಡಿಸಿ, ದೀಪಗಳನ್ನು ಬೆಳಗಿಸುವ ಮೂಲಕ ಬೆಳಕಿನ ಹಬ್ಬವನ್ನು ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದರು.

ದೀಪಾವಳಿ ಸಂಭ್ರಮದ ವೇಳೆ ಮಾತನಾಡಿದ ಯೋಧರೊಬ್ಬರು, ದೇಶದ ಜನತೆಗೆ ಆತಂಕ ಬೇಡ. ನಾವಿದ್ದೇವೆ. ಹಬ್ಬವನ್ನು ಸಂಭ್ರಮದಿಂದ ಆಚರಿಸಿ ಎಂದು ಹೇಳಿದರು. ಇದೇ ವೇಳೆ ಕರ್ನಲ್ ಇಕ್ಬಾಲ್ ಸಿಂಗ್ ಜನತೆಗೆ ದೀಪಾವಳಿ ಶುಭಾಶಯ ಕೋರಿದರು.

ಕಳೆದ ಎರಡು ವರ್ಷಗಳಿಂದ ಕೋವಿಡ್ ಸಾಂಕ್ರಾಮಿಕ ರೋಗ ತಲೆದೋರಿದ್ದ ಹಿನ್ನೆಲೆಯಲ್ಲಿ ಜನರು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ಬಾರಿ ಸೋಂಕು ಸ್ವಲ್ಪ ಮಟ್ಟಿಗೆ ನಿಯಂತ್ರಣದಲ್ಲಿರುವುದರಿಂದ ದೀಪಾವಳಿ ಸಂಭ್ರಮದ ಎಲ್ಲೆಡೆ ಮನೆಮಾಡುತ್ತಿದೆ. 

ಸನಾತನ ಧರ್ಮದಲ್ಲಿ ದೀಪಾವಳಿ ಹಬ್ಬಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ಹಬ್ಬವನ್ನು ಅತ್ಯಂತ ಉತ್ಸಾಹ ಮತ್ತು ಸಡಗರದಿಂದ ಆಚರಿಸಲಾಗುತ್ತದೆ. ದೀಪಾವಳಿಯನ್ನು ಪ್ರತಿ ವರ್ಷ ಕಾರ್ತಿಕ ಮಾಸದ ಅಮಾವಾಸ್ಯೆಯಂದು ಆಚರಿಸಲಾಗುತ್ತದೆ. ಇದಕ್ಕೂ ಮುನ್ನ ನರಕ ಚತುರ್ದಶಿ ಹಬ್ಬ ಬರುತ್ತದೆ.  ನಂತರ ಲಕ್ಷ್ಮೀ ಪೂಜೆ, ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ. 

ಈ ಬಾರಿಯ ಹಬ್ಬದ ಮೇಲೆ ಗ್ರಹಣದ ಕರಿಛಾಯೆ ಬಿದ್ದಿದೆ. ಈ ಬಾರಿಯ ನರಕ ಚತುರ್ದಶಿಯ ಮಾರನೇ ದಿನ ಸೂರ್ಯಗ್ರಹಣ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ಲಕ್ಷ್ಮೀ ಪೂಜೆ, ಅಂಗಡಿ ಪೂಜೆ ಗೋಪೂಜೆ ಮಾಡುವ ಮುಹೂರ್ತದಲ್ಲಿ ಕೂಡಾ ಬದಲಾವಣೆಯಾಗಲಿದೆ. ಸೂರ್ಯಗ್ರಹಣ ಇರುವ ಹಿನ್ನೆಲೆಯಲ್ಲಿ ಹಬ್ಬದ ಪೂಜೆಯ ಬಗ್ಗೆ ಜನರಲ್ಲಿ ಗೊಂದಲ ಮೂಡಿದೆ. 

ಲಕ್ಷ್ಮೀ ಪೂಜೆ, ಗೋವರ್ಧನ ಪೂಜೆಯನ್ನು ಪ್ರತಿ ವರ್ಷನರಕ ಚತಿರ್ದಶಿಯ  ಮರುದಿನ ಆಚರಿಸಲಾಗುತ್ತದೆ. ಆದರೆ, ಈ ಬಾರಿ ಸೂರ್ಯಗ್ರಹಣದಿಂದಾಗಿ ಅದರಲ್ಲಿ ಸ್ವಲ್ಪ ಬದಲಾವಣೆಯಾಗಿದೆ. ನರಕ ಚತುರ್ದಶಿಯ ಮಾರನೇ ದಿನ  ಅಂದರೆ ಅಕ್ಟೋಬರ್ 25 ರಂದು ಸೂರ್ಯಗ್ರಹಣ ಇರುತ್ತದೆ.  ಸೂರ್ಯಗ್ರಹಣದಂದು ಪೂಜೆ ಮಾಡುವುದು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ  ಲಕ್ಷ್ಮೀ ಪೂಜೆಯನ್ನು  ಅಕ್ಟೋಬರ್ 25ರ ಬದಲಾಗಿ ಅಕ್ಟೋಬರ್ 26ರಂದು ಆಚರಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.