ದೇಶ

ಚಾಕು ತೋರಿಸಿ ಆಸ್ಪತ್ರೆಯೊಳಗೆ ಆರೋಗ್ಯ ಕಾರ್ಯಕರ್ತೆಯ ಮೇಲೆ 17 ವರ್ಷದ ಅಪ್ರಾಪ್ತನಿಂದ ಅತ್ಯಾಚಾರ

ಛತ್ತೀಸ್‌ಗಢದ ಮನೇಂದ್ರಗಢ-ಚಿರ್ಮಿರಿ-ಭರತ್‌ಪುರ (ಎಂಸಿಬಿ) ಜಿಲ್ಲೆಯಲ್ಲಿ 32 ವರ್ಷದ ಆರೋಗ್ಯ ಕಾರ್ಯಕರ್ತೆಯ ಮೇಲೆ ಅಪ್ರಾಪ್ತನೊಬ್ಬ ಆಸ್ಪತ್ರೆಯಲ್ಲಿಯೇ ಚಾಕು ತೋರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಚಾಕು ತೋರಿಸಿ ಆಸ್ಪತ್ರೆಯೊಳಗೆ ಆರೋಗ್ಯ ಕಾರ್ಯಕರ್ತೆಯ ಮೇಲೆ 17 ವರ್ಷದ ಅಪ್ರಾಪ್ತನಿಂದ ಅತ್ಯಾಚಾರ
ಪ್ರಾತಿನಿಧಿಕ ಚಿತ್ರ
Published On :

ಕೊರ್ಬಾ: ಛತ್ತೀಸ್‌ಗಢದ ಮನೇಂದ್ರಗಢ-ಚಿರ್ಮಿರಿ-ಭರತ್‌ಪುರ (ಎಂಸಿಬಿ) ಜಿಲ್ಲೆಯಲ್ಲಿ 32 ವರ್ಷದ ಆರೋಗ್ಯ ಕಾರ್ಯಕರ್ತೆಯ ಮೇಲೆ ಅಪ್ರಾಪ್ತನೊಬ್ಬ ಆಸ್ಪತ್ರೆಯಲ್ಲಿಯೇ ಚಾಕು ತೋರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

17 ವರ್ಷದ ಆರೋಪಿ ಮತ್ತು ಆತನ ಇಬ್ಬರು ಸಹಚರರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಗ್ರಖಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ಚಿಪ್ಚಿಪ್ ಗ್ರಾಮ ಪಂಚಾಯಿತಿಯ ಉಪ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಠಾಣಾಧಿಕಾರಿ (ಎಸ್‌ಎಚ್‌ಒ) ಜಾಗ್ರಖಂಡ್ ದೀಪಕ್ ಸೈನಿ ತಿಳಿಸಿದ್ದಾರೆ.

ಈ ಸಂಬಂಧ ಶನಿವಾರ ಬೆಳಗ್ಗೆ ಮಹಿಳೆ ದೂರು ನೀಡಿದ್ದು, ಪೊಲೀಸರು ಕ್ರಮಕೈಗೊಂಡಿದ್ದಾರೆ. ಗ್ರಾಮದ ಹೊರವಲಯದಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಮಹಿಳೆ ಒಬ್ಬಂಟಿಯಾಗಿದ್ದಳು. ಈ ವೇಳೆ ಅಪ್ರಾಪ್ತ ಮತ್ತು ಆತನ ಮೂವರು ಸಹಚರರು ಒಳಗೆ ನುಗ್ಗಿದ್ದಾರೆ. ನಂತರ ಚಾಕುವಿನಿಂದ ಬೆದರಿಸಿ ಆಕೆಯ ಕೈಕಾಲುಗಳನ್ನು ಕಟ್ಟಿದ್ದಾರೆ. ನಂತರ ಹುಡುಗ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸ್ಥಳದಿಂದ ಪರಾರಿಯಾಗುವ ಮೊದಲು ಅವರು ಕೃತ್ಯವನ್ನು ಚಿತ್ರೀಕರಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.