ಶಿಂಧೆ ಬಣದಲ್ಲಿ ಬಿರುಕು; ಶೀಘ್ರದಲ್ಲೆ ಬಿಜೆಪಿ ಸೇರಲಿದ್ದಾರೆ 22 ಶಾಸಕರು: ಶಿವಸೇನೆ ಮುಖವಾಣಿ ಸಾಮ್ನಾ ವರದಿ
ಏಕನಾಥ್ ಶಿಂಧೆ ನೇತೃತ್ವದ ಸೇನೆಯ 40 ಶಾಸಕರ ಪೈಕಿ 22 ಶಾಸಕರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ತನ್ನ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ.

ಮುಂಬಯಿ: ಏಕನಾಥ್ ಶಿಂಧೆ ನೇತೃತ್ವದ ಸೇನೆಯ 40 ಶಾಸಕರ ಪೈಕಿ 22 ಶಾಸಕರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ತನ್ನ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ.
ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದು ಬಿಜೆಪಿ ಮಾಡಿದ ‘ತಾತ್ಕಾಲಿಕ ವ್ಯವಸ್ಥೆ’ ಎಂದು ತನ್ನ ಸಾಪ್ತಾಹಿಕ ಅಂಕಣದಲ್ಲಿ ಬರೆಯಲಾಗಿದೆ. ಅವರ ಮುಖ್ಯಮಂತ್ರಿ ಸಮವಸ್ತ್ರವನ್ನು ಯಾವಾಗ ಬೇಕಾದರೂ ತೆಗೆಯಲಾಗುವುದು ಎಂದು ಈಗ ಎಲ್ಲರಿಗೂ ಅರ್ಥವಾಗಿದೆ. ಅಂಧೇರಿ ಪೂರ್ವ ಉಪಚುನಾವಣೆಯಲ್ಲಿ ಶಿಂಧೆ ಅವರ ಗುಂಪು ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಿತ್ತು. ಆದರೆ ಅದನ್ನು ತಪ್ಪಿಸಿದ್ದು ಬಿಜೆಪಿ” ಎಂದು ಸಾಮ್ನಾದಲ್ಲಿನ ರೋಕ್‌ಥೋಕ್ ಅಂಕಣದಲ್ಲಿ ಹೇಳಲಾಗಿದೆ.
ಮಹಾರಾಷ್ಟ್ರದ ಗ್ರಾಮ ಪಂಚಾಯಿತಿ ಮತ್ತು ಸರಪಂಚ್ ಚುನಾವಣೆಯಲ್ಲಿ ಶಿಂಧೆ ಬಣದ ಯಶಸ್ಸಿನ ಹೇಳಿಕೆ ಸುಳ್ಳು. ಶಿಂಧೆ ಗುಂಪಿನ ಕನಿಷ್ಠ 22 ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ಬಹುಪಾಲು ಶಾಸಕರು ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದ್ದಾರೆ” ಎಂದು ಅಂಕಣದಲ್ಲಿ ಹೇಳಲಾಗಿದೆ.
ಶಿಂಧೆಯವರು ತನಗೆ ಮತ್ತು ಮಹಾರಾಷ್ಟ್ರಕ್ಕೆ ದೊಡ್ಡ ಹಾನಿಯನ್ನು ಉಂಟು ಮಾಡಿದ್ದಾರೆ. ರಾಜ್ಯವು ಅವರನ್ನು ಕ್ಷಮಿಸುವುದಿಲ್ಲ. ಬಿಜೆಪಿ ತಮ್ಮ ಲಾಭಕ್ಕಾಗಿ ಶಿಂಧೆ ಅವರನ್ನು ಇನ್ನೂ ಬಳಸಿಕೊಳ್ಳುತ್ತದೆ’ ಎಂದು ಉದ್ಧವ್ ನೇತೃತ್ವದ ಸೇನೆ ತನ್ನ ಮುಖವಾಣಿಯಲ್ಲಿ ಹೇಳಿಕೊಂಡಿದೆ.
ಶಿಂಧೆ ಅವರ ಮುಖ್ಯಮಂತ್ರಿ ಸಮವಸ್ತ್ರವನ್ನು ಯಾವಾಗ ಬೇಕಾದರೂ ತೆಗೆಯಲಾಗುತ್ತದೆ ಎಂದು ಈಗ ಎಲ್ಲರಿಗೂ ಅರ್ಥವಾಗಿದೆ. ಅಂಧೇರಿ ಪೂರ್ವ ಉಪಚುನಾವಣೆಯಲ್ಲಿ ಶಿಂಧೆ ಅವರ ಗುಂಪು ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಿತ್ತು. ಆದರೆ ಅದನ್ನು ತಪ್ಪಿಸಿದ್ದು ಬಿಜೆಪಿ" ಎಂದು ಸಾಮ್ನಾದಲ್ಲಿನ ರೋಕ್‌ಥೋಕ್ ಅಂಕಣದಲ್ಲಿ ಹೇಳಲಾಗಿದೆ. ಸರಕಾರದ ಎಲ್ಲಾ ನಿರ್ಧಾರಗಳನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತೆಗೆದುಕೊಳ್ಳುತ್ತಾರೆ ಹಾಗೂ ಸಿಎಂ ಶಿಂಧೆ ಆ ನಿರ್ಧಾರಗಳನ್ನು ಪ್ರಕಟಿಸುತ್ತಾರೆ" ಎಂದು ಅಂಕಣದಲ್ಲಿ ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


