ರಾಜ್ಯಪಾಲ ಆರಿಫ್ ಖಾನ್ ಆರ್'ಎಸ್ಎಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ಸಿಎಂ ಪಿಣರಾಯಿ ವಿಜಯನ್
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಮತ್ತು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಆರೋಪಿಸಿದ್ದಾರೆ.

ಪಾಲಕ್ಕಾಡ್ (ಕೇರಳ): ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಮತ್ತು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಆರೋಪಿಸಿದ್ದಾರೆ.
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕೇರಳದ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳ ರಾಜೀನಾಮೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರ ವಿರುದ್ಧ ಪಿಣರಾಯಿ ವಿಜಯನ್ ಅವರು ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯಪಾಲರು ಕುಲಪತಿ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡು ತನಗಿಂತ ಹೆಚ್ಚಿನ ಅಧಿಕಾರವನ್ನು ಚಲಾಯಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಮತ್ತು ಉಪಕುಲಪತಿಗಳ ಅಧಿಕಾರದ ಮೇಲೆ ಅತಿಕ್ರಮಣವಾಗಿದೆ. ರಾಜ್ಯಪಾಲರ ಹುದ್ದೆಯು ಸಂವಿಧಾನದ ಘನತೆಯನ್ನು ಎತ್ತಿಹಿಡಿಯ ಬೇಕೇ ಹೊರತು ಸರ್ಕಾರದ ವಿರುದ್ಧ ನಡೆಯಬಾರದು. ರಾಜ್ಯಪಾಲರು ಆರ್'ಎಸ್ಎಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆಂದು ಹೇಳಿದ್ದಾರೆ.
ಇತ್ತೀಚೆಗೆ ಸುಪ್ರೀಂ ಕೋರ್ಟ್, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿವಿಯ ಉಪಕುಲಪತಿ ನೇಮಕವನ್ನು ಯುಜಿಸಿ ನಿಯಮಗಳಿಗೆ ವಿರುದ್ಧವಾಗಿದೆ ಎಂದು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ರಾಜ್ಯಪಾಲರು 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ.
ವಿವಿಗಳ ಕುಲಪತಿಗಳೂ ಆಗಿರುವ ರಾಜ್ಯಪಾಲರು ಸೋಮವಾರ ಬೆಳಿಗ್ಗೆ 11.30 ರ ವೇಳೆಗೆ ಉಪಕುಲಪತಿಗಳ ರಾಜೀನಾಮೆ ತಮಗೆ ತಲುಪಬೇಕು ಎಂದೂ ನಿರ್ದೇಶನ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


