ದೇಶ

ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನಾಳೆ ಅಧಿಕಾರ ಸ್ವೀಕಾರ

ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನಾಳೆ ಅಧಿಕಾರ ಸ್ವೀಕಾರ
ಮಲ್ಲಿಕಾರ್ಜುನ ಖರ್ಗೆ
Published On :

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಉತ್ತರಾಧಿಕಾರಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಾಳೆ ಲಾಠಿ ಹಸ್ತಾಂತರಿಸಲಿರುವ ಸಮಾರಂಭಕ್ಕೆ ಕಾಂಗ್ರೆಸ್‌ ಪ್ರಧಾನ ಕಛೇರಿಯಲ್ಲಿ ಭರದ ಸಿದ್ಧತೆಗಳು ನಡೆದಿವೆ.

ಗಾಂಧಿ ಕುಟುಂಬ ಸ್ಪರ್ಧೆಯಿಂದ ಹೊರಗುಳಿದ ನಂತರ ಗ್ರ್ಯಾಂಡ್ ಓಲ್ಡ್ ಪಕ್ಷದ ಉನ್ನತ ಹುದ್ದೆಗೆ ನಡೆದ ಚುನಾವಣೆಯಲ್ಲಿ ತಿರುವನಂತಪುರಂ ಸಂಸದ ಶಶಿ ತರೂರ್ ಅವರ ವಿರುದ್ಧ ಖರ್ಗೆ ಗೆಲುವು ಸಾಧಿಸಿದ್ದರು. 

ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಔಪಚಾರಿಕವಾಗಿ ಚುನಾವಣಾ ಪ್ರಮಾಣಪತ್ರವನ್ನು ಖರ್ಗೆ ಅವರಿಗೆ ಹಸ್ತಾಂತರಿಸಲಿದ್ದು, ನಂತರ ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಖರ್ಗೆ ಅವರಿಗೆ ಅಧಿಕೃತವಾಗಿ ಅಧಿಕಾರ ಹಸ್ತಾಂತರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.