ಹಿಮಾಚಲ ಚುನಾವಣೆ: ಬಿಜೆಪಿ ತೊರೆದ ಇಬ್ಬರು ನಾಯಕರು, ಧರ್ಮಶಾಲಾದಿಂದ ಪಕ್ಷೇತರರಾಗಿ ಸ್ಪರ್ಧೆ
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿಯ ಇಬ್ಬರು ಹಿರಿಯ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿ ಮಂಗಳವಾರ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಧರ್ಮಶಾಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿಯ ಇಬ್ಬರು ಹಿರಿಯ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿ ಮಂಗಳವಾರ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷದ ಎಸ್ಟಿ ಮೋರ್ಚಾ ಉಪಾಧ್ಯಕ್ಷ ವಿಪಿನ್ ನೈಹಾರಿ ಮತ್ತು ಬಿಜೆಪಿ ಜಿಲ್ಲಾ ಅಧ್ಯಕ್ಷ ಅನಿಲ್ ಚೌಧರಿ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಪಕ್ಷ ಒಬಿಸಿ ನಾಯಕ ರಾಕೇಶ್ ಚೌಧರಿ ಮತ್ತು ಹಾಲಿ ಶಾಸಕ ವಿಶಾಲ್ ನೈಹಾರಿ ಅವರಿಗೆ ಟಿಕೆಟ್ ನೀಡಿದೆ.
ಟಿಕೆಟ್ ವಂಚಿತ ಇಬ್ಬರು ನಾಯಕರೂ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ.
ಅನಿಲ್ ಚೌಧರಿ ಅವರಿಗೆ ಪಕ್ಷದ ಟಿಕೆಟ್ ನೀಡುವಂತೆ ಒತ್ತಾಯಿಸಿ ಬಿಜೆಪಿ ಧರ್ಮಶಾಲಾ ಮಂಡಲದ ಎಲ್ಲಾ ಪದಾಧಿಕಾರಿಗಳು ಪ್ರತಿಭಟನೆ ಮಾಡಿದ್ದಾರೆ ಎಂದು ಗಡ್ಡಿ ಸಮುದಾಯದ ಮುಖಂಡ ವಿಪಿನ್ ನೈಹಾರಿಯಾ ಅವರು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 29 ಕೊನೆಯ ದಿನವಾಗಿದೆ.
ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


