ದೇಶ

ವಿರಾಮದ ಬಳಿಕ ತೆಲಂಗಾಣದಲ್ಲಿ ಅಕ್ಟೋಬರ್ 27ರಿಂದ ಭಾರತ್ ಜೋಡೋ ಯಾತ್ರೆ ಪುನರಾರಂಭ

ಮೂರು ದಿನಗಳ ವಿರಾಮದ ನಂತರ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಅಕ್ಟೋಬರ್ 27 ರಂದು ತೆಲಂಗಾಣದ ನಾರಾಯಣಪೇಟ್ ಜಿಲ್ಲೆಯ ಮಕ್ತಲ್‌ನಿಂದ ಪುನರಾರಂಭಗೊಳ್ಳಲಿದೆ ಎಂದು ಪಕ್ಷದ ಮೂಲಗಳು ಬುಧವಾರ ತಿಳಿಸಿವೆ.

ವಿರಾಮದ ಬಳಿಕ ತೆಲಂಗಾಣದಲ್ಲಿ ಅಕ್ಟೋಬರ್ 27ರಿಂದ ಭಾರತ್ ಜೋಡೋ ಯಾತ್ರೆ ಪುನರಾರಂಭ
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ
Published On :

ಹೈದರಾಬಾದ್: ಮೂರು ದಿನಗಳ ವಿರಾಮದ ನಂತರ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಅಕ್ಟೋಬರ್ 27 ರಂದು ತೆಲಂಗಾಣದ ನಾರಾಯಣಪೇಟ್ ಜಿಲ್ಲೆಯ ಮಕ್ತಲ್‌ನಿಂದ ಪುನರಾರಂಭಗೊಳ್ಳಲಿದೆ ಎಂದು ಪಕ್ಷದ ಮೂಲಗಳು ಬುಧವಾರ ತಿಳಿಸಿವೆ.

ಭಾರತ್ ಜೋಡೋ ಯಾತ್ರೆ ಅಕ್ಟೋಬರ್ 23 ರಂದು ಬೆಳಿಗ್ಗೆ ರಾಯಚೂರಿನಿಂದ ಕರ್ನಾಟಕದಿಂದ ನಿರ್ಗಮಿಸಿದ ನಂತರ ಗುಡೆಬೆಳ್ಳೂರು ಮೂಲಕ ತೆಲಂಗಾಣ ರಾಜ್ಯವನ್ನು ಪ್ರವೇಶಿಸಿತ್ತು.

ಇಂದು ಸಂಜೆ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಟಿಪಿಸಿಸಿ ಮೂಲಗಳು ತಿಳಿಸಿವೆ.

ಬಳಿಕ ಅಕ್ಟೋಬರ್ 27ರಂದು ಬೆಳಗ್ಗೆ 6.30ಕ್ಕೆ ಮಕ್ತಲ್‌ನ 11/22 ಕೆವಿ ಸಬ್‌ಸ್ಟೇಷನ್‌ನಿಂದ ಮೂರು ಕಿಮೀ ಕ್ರಮಿಸಿದ ನಂತರ ಅವರು ಕನ್ನಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಬಹುದು ಎಂದು ಮೂಲಗಳು ತಿಳಿಸಿವೆ.

ಇದು ತೆಲಂಗಾಣದಲ್ಲಿ 16 ದಿನಗಳ ಕಾಲ ಮುಂದುವರಿಯಲಿದ್ದು, 19 ವಿಧಾನಸಭೆ ಮತ್ತು ಏಳು ಸಂಸದೀಯ ಕ್ಷೇತ್ರಗಳನ್ನೊಳಗೊಂಡ 375 ಕಿ.ಮೀ ದೂರದವರೆಗೆ ಸಾಗಿ ನವೆಂಬರ್ 7ರಂದು ಮಹಾರಾಷ್ಟ್ರ ಪ್ರವೇಶಿಸಲಿದೆ.

ಗಾಂಧಿ ಅವರು ಪ್ರತಿದಿನ 20-25 ಕಿಮೀ 'ಪಾದಯಾತ್ರೆ' ಕೈಗೊಳ್ಳಲಿದ್ದಾರೆ ಮತ್ತು ಪಾದಯಾತ್ರೆಯಲ್ಲಿ ಜನರೊಂದಿಗೆ ಸಂವಾದ ನಡೆಸಲಿದ್ದಾರೆ. ಬುದ್ಧಿಜೀವಿಗಳು, ವಿವಿಧ ಸಮುದಾಯಗಳ ಮುಖಂಡರು, ರಾಜಕಾರಣಿಗಳು, ಕ್ರೀಡೆ, ಉದ್ಯಮ ಮತ್ತು ಚಿತ್ರರಂಗದ ಪ್ರಮುಖರನ್ನು ಭೇಟಿ ಮಾಡಲಿದ್ದಾರೆ.

ತೆಲಂಗಾಣದ ಕೆಲವು ಪ್ರಾರ್ಥನಾ ಮಂದಿರಗಳು, ಮಸೀದಿಗಳು ಮತ್ತು ದೇವಾಲಯಗಳಿಗೆ ಭೇಟಿ ನೀಡಲಿದ್ದು, ಅಂತರ ಧರ್ಮೀಯ ಪ್ರಾರ್ಥನೆಯನ್ನೂ ಸಲ್ಲಿಸಲಾಗುವುದು ಎಂದು ಟಿಪಿಸಿಸಿ ತಿಳಿಸಿದೆ.

ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಯಾತ್ರೆಯು ತೆಲಂಗಾಣಕ್ಕೆ ಪ್ರವೇಶಿಸುವ ಮುನ್ನ ಕೇರಳ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಯಾತ್ರೆ ಪೂರ್ಣಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.