ಎಂಸಿಡಿಯಲ್ಲಿ ಆಪ್ ಅಧಿಕಾರಕ್ಕೆ ಬಂದರೆ 5 ವರ್ಷಗಳಲ್ಲಿ ದೆಹಲಿ ಸ್ವಚ್ಛಗೊಳಿಸುತ್ತೇವೆ: ಕೇಜ್ರಿವಾಲ್
ಮುಂಬರುವ ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ)ಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ರಾಷ್ಟ್ರ ರಾಜಧಾನಿಯನ್ನು ಸ್ವಚ್ಛಗೊಳಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ...

ನವದೆಹಲಿ: ಮುಂಬರುವ ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ)ಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ರಾಷ್ಟ್ರ ರಾಜಧಾನಿಯನ್ನು ಸ್ವಚ್ಛಗೊಳಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಭರವಸೆ ನೀಡಿದ್ದಾರೆ.
ಇಂದು ಗಾಜಿಪುರದ ಹೂಳು ತುಂಬುವ ಸ್ಥಳಕ್ಕೆ ಭೇಟಿ ನೀಡಿದ ದೆಹಲಿ ಸಿಎಂ, ಮುಂಬರುವ ಎಂಸಿಡಿ ಚುನಾವಣೆಯಲ್ಲಿ ಕಸದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಡಲಾಗುವುದು ಎಂದು ಹೇಳಿದರು.
ಈ ವೇಳೆ ನೂರಾರು ಬಿಜೆಪಿ ಬೆಂಬಲಿಗರು ಪ್ರತಿಭಟನೆ ನಡೆಸಿ ಕೇಜ್ರಿವಾಲ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಯಾಗಿ, ಆಮ್ ಆದ್ಮಿ ಪಕ್ಷದ(ಎಎಪಿ) ಕಾರ್ಯಕರ್ತರು ಕೇಸರಿ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು.
"ಈ ಕಸದ ಗುಡ್ಡೆಯ ರಕ್ಷಣೆಗೆ ಅವರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಎಲ್ಲಾ ದುಷ್ಟ ಶಕ್ತಿಗಳು ನಮ್ಮ (ಎಎಪಿ) ವಿರುದ್ಧ ಪಿತೂರಿ ನಡೆಸಿವೆ. ಅವರು ಎಂಸಿಡಿ ಚುನಾವಣೆಯನ್ನು ಉದ್ದೇಶಪೂರ್ವಕವಾಗಿಯೇ ವಿಳಂಬ ಮಾಡಿದರು ಮತ್ತು ಅವರಿಗೆ ಹೆಚ್ಚು ಸ್ಥಾನ ಸಿಗುತ್ತದೆ ಎಂಬ ಭರವಸೆಯಿಂದ ವಾರ್ಡ್ಗಳನ್ನು ವಿಂಗಡಣೆ ಮಾಡಿದರು ಎಂದು ಆರೋಪಿಸಿದ ಕೇಜ್ರಿವಾಲ್, ಬಿಜೆಪಿಗೆ ಮತ ಹಾಕಬೇಡಿ ಎಂದು ಮನವಿ ಮಾಡಿದರು.
ಬಿಜೆಪಿ ತಮ್ಮ 15 ವರ್ಷಗಳ ಮಹಾನಗರ ಪಾಲಿಕೆಗಳ ಆಡಳಿತದಲ್ಲಿ 2 ಲಕ್ಷ ಕೋಟಿ ರೂಪಾಯಿ ಲೂಟಿ ಮಾಡಿದೆ ಎಂದು ದೆಹಲಿ ಸಿಎಂ ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


