ದೇಶ

ಡಿಎಂಕೆ ನಾಯಕನ ಅವಹೇಳನಕಾರಿ ಹೇಳಿಕೆ: ಕ್ಷಮೆ ಕೇಳಿದ್ರು ಒಪ್ಪಲ್ಲ- ಖುಷ್ಬು

ಖುಷ್ಬು ಮತ್ತು ಬಿಜೆಪಿಯ ಇತರ ಮಹಿಳೆಯರನ್ನು ಐಟಂ ಎಂದು ಟೀಕಿಸಿದ್ದ ಡಿಎಂಕೆ ನಾಯಕ ಸೈದಾಯಿ ಸಿದ್ದಿಕ್ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಡಿಎಂಕೆ ನಾಯಕನ ಅವಹೇಳನಕಾರಿ ಹೇಳಿಕೆ: ಕ್ಷಮೆ ಕೇಳಿದ್ರು ಒಪ್ಪಲ್ಲ- ಖುಷ್ಬು
ನಟಿ ಖುಷ್ಬು
Published On :

ಚೆನ್ನೈ:  ಖುಷ್ಬು ಮತ್ತು ಬಿಜೆಪಿಯ ಇತರ ಮಹಿಳೆಯರನ್ನು ಐಟಂ ಎಂದು ಟೀಕಿಸಿದ್ದ ಡಿಎಂಕೆ ನಾಯಕ ಸೈದಾಯಿ ಸಿದ್ದಿಕ್ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಖುಷ್ಬು, ಡಿಎಂಕೆ ನಾಯಕ ನನ್ನನ್ನು ಮಾತ್ರ ಅಮಾನಿಸಿಲ್ಲ, ಮಹಿಳೆಯರು ಹಾಗೂ ಅವರ ಕುಟುಂಬ ವರ್ಗದವರನ್ನು ಅವಮಾನಿಸಿದ್ದಾರೆ. ಸಾಮಾನ್ಯರಂತೆ ಹೇಳಿಕೆ ನೀಡಿರುವ ಅವರು ಕ್ಷಮೆ ಸ್ವೀಕರಿಸಲು ನಾನು ಸಿದ್ದರಿಲ್ಲ ಎಂದಿದ್ದಾರೆ.

ನನಗೆ ಬೆಂಬಲ ನೀಡಿರುವ ಡಿಎಂಕೆ ಸಂಸದೆ ಕನ್ನಿಮೋಳಿ ಅವರನ್ನು ನಿಜಕ್ಕೂ ಪ್ರಶಂಸಿಸುತ್ತೇನೆ. ಮಹಿಳೆಯರ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಯಾವಾಗಲೂ ಅವರು ಬೆಂಬಲಿಸುತ್ತಿರುವುದನ್ನು ನಾನು ನೋಡಿದ್ದೇನೆ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಮಹಿಳೆಯರ ಬಗ್ಗೆ ಇತರರು ಈ ರೀತಿಯ ಹೇಳಿಕೆ ನೀಡದಂತೆ ಸಿಎಂ ಕ್ರಮ ಕೈಗೊಳ್ಳುವುದ್ದಕ್ಕಾಗಿ ಅವರೊಂದಿಗೆ ಮಾತನಾಡಲು ಕಾಯುತ್ತಿದ್ದೇನೆ. ತಮಿಳುನಾಡು ಮುಖ್ಯಮಂತ್ರಿ ಉತ್ತಮ ಉದಾಹರಣೆಯಾಗಬೇಕೆಂದು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.