ದೇಶ

ರಾಜಸ್ಥಾನ: ಅಂತಾರಾಷ್ಟ್ರೀಯ ಗಡಿ ದಾಟಲು ಯತ್ನಿಸುತ್ತಿದ್ದ ಪಾಕ್ ನಾಗರಿಕ ಬಿಎಸ್‌ಎಫ್ ಗುಂಡಿಗೆ ಬಲಿ

ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಅನುಪ್‌ಗಢ ಸೆಕ್ಟರ್‌ನಲ್ಲಿ ಭಾರತದ ಭೂಪ್ರದೇಶವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ಪಾಕಿಸ್ತಾನದ ನಾಗರಿಕನನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ರಾಜಸ್ಥಾನ: ಅಂತಾರಾಷ್ಟ್ರೀಯ ಗಡಿ ದಾಟಲು ಯತ್ನಿಸುತ್ತಿದ್ದ ಪಾಕ್ ನಾಗರಿಕ ಬಿಎಸ್‌ಎಫ್ ಗುಂಡಿಗೆ ಬಲಿ
ಸಾಂದರ್ಭಿಕ ಚಿತ್ರ
Published On :

ಜೈಪುರ: ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಅನುಪ್‌ಗಢ ಸೆಕ್ಟರ್‌ನಲ್ಲಿ ಭಾರತದ ಭೂಪ್ರದೇಶವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ಪಾಕಿಸ್ತಾನದ ನಾಗರಿಕನನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಗಡಿ ಭದ್ರತಾ ಪಡೆ ಸಿಬ್ಬಂದಿ ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಪಾಕಿಸ್ತಾನಿ ನಾಗರಿಕನೊಬ್ಬ ಭಾರತ ಪ್ರವೇಶಿಸಲು ಯತ್ನಿಸುತ್ತಿರುವುದು ಕಂಡು ಬಂದಿದೆ.

ಗಡಿ ಪ್ರವೇಶಿಸದಂತೆ ಯೋಧರು ಎಚ್ಚರಿಸಿದರೂ ನಿಲ್ಲಿಸದೆ ಇದ್ದಾಗ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಶ್ರೀಗಂಗಾನಗರ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಶರ್ಮಾ ತಿಳಿಸಿದ್ದಾರೆ.

ಈ ಸಂಬಂಧ ಅನುಪ್ ಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವವನ್ನು ಶವಾಗಾರದಲ್ಲಿ ಇರಿಸಲಾಗಿದೆ.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದು, ಆತನ ಬಳಿ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.