ಜಾಹೀರಾತಿನಲ್ಲಿ ಪ್ರಧಾನಿ ಮೋದಿಗೆ ಅವಮಾನ?: ಟ್ವಿಟರ್ ನಲ್ಲಿ ಟ್ರೆಂಡ್ ಆದ 'ಬಾಯ್ಕಾಟ್ ಕ್ಯಾಡ್‌ಬರಿ'
ಜಾಹೀರಾತೊಂದರಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಇದೀಗ ಟ್ವಿಟರ್ ನಲ್ಲಿ ಬಾಯ್ಕಾಟ್ ಕ್ಯಾಡ್‌ಬರಿ ಟ್ರೆಂಡ್ ಆಗಿದೆ.

ಬೆಂಗಳೂರು: ಜಾಹೀರಾತೊಂದರಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಇದೀಗ ಟ್ವಿಟರ್ ನಲ್ಲಿ ಬಾಯ್ಕಾಟ್ ಕ್ಯಾಡ್‌ಬರಿ ಟ್ರೆಂಡ್ ಆಗಿದೆ.
ಕ್ಯಾಡ್‌ಬರಿ ದೀಪಾವಳಿಗೆ ತನ್ನ ಉತ್ಪನ್ನ ಉತ್ತೇಜಿಸುವ ಟಿವಿ ಜಾಹೀರಾತೊಂದನ್ನು ಬಿಡುಗಡೆಗೊಳಿಸಿದ್ದು, ಅದರಲ್ಲಿ ದಾಮೋದರ ಎಂಬ ದೀಪದ ವ್ಯಾಪಾರಿಯನ್ನು ತೋರಿಸಲಾಗಿದೆ. ಈ ವಿಡಿಯೊವನ್ನು ವಿಶ್ವ ಹಿಂದು ಪರಿಷತ್‌ನ ಸಾಧ್ವಿ ಪ್ರಾಚಿ ಶೇರ್ ಮಾಡಿದ್ದು, ಜಾಹೀರಾತಿನಲ್ಲಿ ತೋರಿಸಿರುವ ಬಡ, ದೀಪದ ಮಾರಾಟಗಾರನ ಹೆಸರನ್ನು 'ದಾಮೋದರ್' ಎಂಬುದಾಗಿ ಬಳಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಹೆಸರನ್ನು ಹೊಂದಿರುವ ಯಾರನ್ನಾದರೂ ಬಡವನೆಂದು ತೋರಿಸಲು ಈ ಜಾಹೀರಾತು ಮಾಡಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಚಾಯ್‌ವಾಲೆ ಕೆ ಬಾಪ್ ದಿಯೇವಾಲಾ’ ಎಂದು ಸಾಧ್ವಿ ಪ್ರಾಚಿ ಟ್ವೀಟ್ ಮಾಡಿದ್ದು, ಜಾಹೀರಾತು ನೋಡಿದ ಹಲವರು ಇದೀಗ ಕ್ಯಾಡ್‌ಬರಿ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಆಗ್ರಹಿಸುತ್ತಿದ್ದಾರೆ.
2021ರಲ್ಲಿಯೂ ಇದೇ ರೀತಿ ಬಹಿಷ್ಕಾರದ ಪೋಸ್ಟ್ ಟ್ರೆಂಡ್ ಆಗಿತ್ತು. ಕ್ಯಾಡ್‌ಬರಿ ಆಸ್ಟ್ರೆಲಿಯಾದ ವೆಬ್‌ನಲ್ಲಿ ನೀಡಿರುವ ವಿವರಣೆಯನ್ನು ಬಳಸಿಕೊಂಡು ಭಾರತದಲ್ಲಿ ಟ್ರೆಂಡ್ ಮಾಡಲಾಗಿತ್ತು. ಆದರೆ, ಹಸಿರು ಚುಕ್ಕಿಯೊಂದಿಗೆ ಕಾಣಿಸಿಕೊಳ್ಳುವ ಕ್ಯಾಡ್‌ಬರಿ ಭಾರತದ ಉತ್ಪನ್ನ ಶೇ.100ರಷ್ಟು ಶಾಕಾಹಾರಿ ಎಂದು ಕಂಪನಿ ಸ್ಪಷ್ಟೀಕರಣ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


