ದೇಶ

ಗುಜರಾತ್: ಯಾತ್ರಾರ್ಥಿಗಳ ಮೇಲೆ ಹರಿದ ಕಾರು, ಆರು ಮಂದಿ ಸಾವು

ಗುಜರಾತ್‌ನ ಅರಾವಳಿ ಜಿಲ್ಲೆಯ ಅಂಬಾಜಿ ದೇವಸ್ಥಾನ ನಗರಿಗೆ ತೆರಳುತ್ತಿದ್ದ ಆರು ಯಾತ್ರಾರ್ಥಿಗಳ ಮೇಲೆ ಇನ್ನೊವಾ ಕಾರು ಹರಿದಿದ್ದು, ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಗುಜರಾತ್: ಯಾತ್ರಾರ್ಥಿಗಳ ಮೇಲೆ ಹರಿದ ಕಾರು, ಆರು ಮಂದಿ ಸಾವು
ಸಾಂದರ್ಭಿಕ ಚಿತ್ರ
Published On :

ಸೂರತ್: ಗುಜರಾತ್‌ನ ಅರಾವಳಿ ಜಿಲ್ಲೆಯ ಅಂಬಾಜಿ ದೇವಸ್ಥಾನ ನಗರಿಗೆ ತೆರಳುತ್ತಿದ್ದ ಆರು ಯಾತ್ರಾರ್ಥಿಗಳ ಮೇಲೆ ಇನ್ನೊವಾ ಕಾರು ಹರಿದಿದ್ದು, ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಈ ಯಾತ್ರಾರ್ಥಿಗಳು ಗುಂಪು ಗುಜರಾತ್‌ನ ದಾಹೋದ್‌ನಿಂದ ಬಂದಿದ್ದು, ಭದರ್ವಿ ಪೂನಂ ಜಾತ್ರೆಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರಿಗೆ ತಲಾ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.