ಮಹಾರಾಷ್ಟ್ರ: 4 ಕೋಟಿ ರೂ. ಮೌಲ್ಯದ 210 ಕೆಜಿ ಗಾಂಜಾ ವಶ; ವ್ಯಕ್ತಿ ಬಂಧನ
ಮುಂಬೈನಿಂದ 100 ಕಿಮೀ ದೂರದ ರಾಯಗಢ ಜಿಲ್ಲೆಯ ಖೋಪೋಲಿಯಲ್ಲಿ 4 ಕೋಟಿ ರೂಪಾಯಿ ಮೌಲ್ಯದ 210 ಕೆ.ಜಿಯಷ್ಟು ಗಾಂಜಾದೊಂದಿಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ಇಲ್ಲಿಂದ 100 ಕಿ.ಮೀ ದೂರದಲ್ಲಿರುವ ರಾಯಗಢ ಜಿಲ್ಲೆಯ ಖೋಪೋಲಿಯಲ್ಲಿ 4 ಕೋಟಿ ರೂಪಾಯಿ ಮೌಲ್ಯದ 210 ಕೆ.ಜಿಯಷ್ಟು ಗಾಂಜಾದೊಂದಿಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಅಂತರರಾಜ್ಯ ಮಾದಕವಸ್ತು ಕಳ್ಳಸಾಗಣೆ ಗ್ಯಾಂಗ್ ಬಗ್ಗೆ ಸುಳಿವು ಪಡೆದುಕೊಂಡ ಮುಂಬೈ ಎನ್‌ಸಿಬಿ ತಂಡವು ಮುಂಬೈ-ಪುಣೆ ಹೆದ್ದಾರಿಯ ಖೋಪೋಲಿಯಲ್ಲಿ ಗುರುವಾರ ಬಲೆ ಬೀಸಿದ್ದು, ಮಹಾನಗರದ ನಿವಾಸಿಯಾಗಿರುವ ವ್ಯಕ್ತಿಯನ್ನು ಬಂಧಿಸಿದೆ ಎಂದು ಅವರು ಹೇಳಿದ್ದಾರೆ.
ಕಂದು ಬಣ್ಣದ ಅಂಟಿನ ಟೇಪ್‌ಗಳಿಂದ ಮುಚ್ಚಿದ್ದ 98 ಪ್ಯಾಕೆಟ್‌ಗಳಲ್ಲಿ ಗಾಂಜಾ ಪತ್ತೆಯಾಗಿದ್ದು, ನಿಷಿದ್ಧ ವಸ್ತುಗಳನ್ನು ಪ್ಯಾಕ್ ಮಾಡುವ ಸಾಮಾನ್ಯ ವಿಧಾನ ಇದಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
'ಗಾಂಜಾವನ್ನು ಪುಣೆಯಲ್ಲಿ ವಶಪಡಿಸಿಕೊಳ್ಳಲಾಗಿದ್ದು, ಮುಖ್ಯ ಪೂರೈಕೆದಾರರು ಅದನ್ನು ಆಂಧ್ರಪ್ರದೇಶ-ಒಡಿಶಾ ಗಡಿಯಿಂದ ಪಡೆದಿರಬಹುದು. ಅದರ ಕೆಲವು ಭಾಗ ಪುಣೆಗೆ ಮತ್ತು ಕೆಲವು ಇಲ್ಲಿನ ಗೋವಂಡಿ ಮತ್ತು ಮಾನ್‌ಖುರ್ದ್‌ನಂತಹ ಪ್ರದೇಶಗಳಿಗೆ ಮೀಸಲಾಗಿರುವುದು ನಮ್ಮ ತನಿಖೆಯಿಂದ ತಿಳಿದುಬಂದಿದೆ. ಕಳೆದ ಕೆಲವು ವರ್ಷಗಳಿಂದ ಈ ಪ್ರದೇಶಗಳಲ್ಲಿ ನಿಷಿದ್ಧ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ' ಎಂದು ಅವರು ಹೇಳಿದರು.
ಪೆಡ್ಲಿಂಗ್ ನೆಟ್‌ವರ್ಕ್, ಅದರ ಪೂರೈಕೆದಾರರು, ಕ್ಯಾರಿಯರ್ಸ್‌ಗಳು ಮತ್ತು ಪೆಡ್ಲರ್‌ಗಳು ಮತ್ತು ಖರೀದಿದಾರರು ಯಾರೆಂಬುದನ್ನು ತಿಳಿಯಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


