ದೇಶ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಜಮ್ಮು ಮತ್ತು ಕಾಶ್ಮೀರದ ಮತ್ತೊಬ್ಬ ಹಿರಿಯ ನಾಯಕ

ಕಾಂಗ್ರೆಸ್ ನಾಯಕ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಶಾಸಕ ಅಶೋಕ್ ಶರ್ಮಾ ಅವರು ಶನಿವಾರ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಜಮ್ಮು ಮತ್ತು ಕಾಶ್ಮೀರದ ಮತ್ತೊಬ್ಬ ಹಿರಿಯ ನಾಯಕ
ಸಾಂದರ್ಭಿಕ ಚಿತ್ರ
Published On :

ಜಮ್ಮು: ಕಾಂಗ್ರೆಸ್ ನಾಯಕ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಶಾಸಕ ಅಶೋಕ್ ಶರ್ಮಾ ಅವರು ಶನಿವಾರ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ರಾಜೀನಾಮೆ ನೀಡಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ 'ವಿಚಾರ ವಿಭಾಗ'ದ ರಾಷ್ಟ್ರೀಯ ಸಂಯೋಜಕ ಮತ್ತು ಪ್ರದೇಶ ಕಾರ್ಯಕಾರಿ ಸಮಿತಿಯ ಸದಸ್ಯ, 'ಪ್ರಚಲಿತ ಪರಿಸ್ಥಿತಿ ಮತ್ತು ಅನಿವಾರ್ಯ ಸಂದರ್ಭಗಳಿಂದ' ನಾನು 'ನೋವಿನ' ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ, ಎಂಟು ಮಾಜಿ ಸಚಿವರು, ಮಾಜಿ ಸಂಸದರು, ಒಂಬತ್ತು ಶಾಸಕರು ಮತ್ತು ಜಮ್ಮು ಮತ್ತು ಕಾಶ್ಮೀರದಾದ್ಯಂತ ಹೆಚ್ಚಿನ ಸಂಖ್ಯೆಯ ಪಂಚಾಯತ್ ರಾಜ್ ಸಂಸ್ಥೆಯ ಸದಸ್ಯರು, ಮುನ್ಸಿಪಲ್ ಕಾರ್ಪೊರೇಟರ್‌ಗಳು ಮತ್ತು ತಳಮಟ್ಟದ ಕಾರ್ಯಕರ್ತರು ಪಕ್ಷವನ್ನು ತೊರೆದ ನಂತರ ಇದೀಗ ಕಾಂಗ್ರೆಸ್‌ನ ಹಿರಿಯ ನಾಯಕರು ಕೂಡ ರಾಜೀನಾಮೆ ಸಲ್ಲಿಸಿದ್ದು, ಗುಲಾಂ ನಬಿ ಆಜಾದ್ ಅವರ ಬಳಗವನ್ನು ಸೇರಿಕೊಂಡಿದ್ದಾರೆ.

73 ವರ್ಷದ ಆಜಾದ್ ಅವರು ಆಗಸ್ಟ್ 26 ರಂದು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡುವ ಮೂಲಕ ಪಕ್ಷದ ಜೊತೆಗಿನ ಐದು ದಶಕಗಳ ಒಡನಾಟವನ್ನು ಕೊನೆಗೊಳಿಸಿದರು.

1996 ರಲ್ಲಿ ರಜೌರಿ ಜಿಲ್ಲೆಯ ಕಲಕೋಟೆ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದ ಶರ್ಮಾ ಅವರು ತಮ್ಮ ಪತ್ರದಲ್ಲಿ, 'ನಾನು ನನ್ನ ಪಕ್ಷವನ್ನು ನನ್ನ ಹೃದಯದಾಳದಿಂದ ಪ್ರೀತಿಸುತ್ತೇನೆ ಮತ್ತು ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲು ದಶಕಗಳಿಂದ ಒಟ್ಟಾಗಿ ಹೋರಾಡಿದೆ' ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.