ದೇಶ

ಕೋವಿಡ್-19: ದೇಶದಾದ್ಯಂತ 6,809 ಹೊಸ ಪ್ರಕರಣ ಪತ್ತೆ, ಸೋಂಕಿನಿಂದ 26 ಜನರು ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,809 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,56,535ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಕೋವಿಡ್-19: ದೇಶದಾದ್ಯಂತ 6,809 ಹೊಸ ಪ್ರಕರಣ ಪತ್ತೆ, ಸೋಂಕಿನಿಂದ 26 ಜನರು ಸಾವು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,809 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,56,535ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 55,114ಕ್ಕೆ ಕಡಿಮೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಇದೇ ಅವಧಿಯಲ್ಲಿ ಕೇರಳದಲ್ಲಿ ಐವರು ಸೇರಿದಂತೆ ದೇಶದಾದ್ಯಂತ 26 ಜನರು ಸಾವಿಗೀಡಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 5,27,991ಕ್ಕೆ ಏರಿಕೆಯಾಗಿದೆ. 8,414 ಜನರು ಇದೇ ಅವಧಿಯಲ್ಲಿ ಗುಣಮುಖರಾಗಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.12ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.69 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 2.12ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ಈವರೆಗೆ ಕೋವಿಡ್‌ನಿಂದ 4,38,73,430 ಜನರು ಗುಣಮುಖರಾಗಿದ್ದಾರೆ.

ಸಚಿವಾಲಯದ ಪ್ರಕಾರ ಲಸಿಕೆ ಅಭಿಯಾನದ ಅಡಿಯಲ್ಲಿ ದೇಶದಲ್ಲಿ ಈವರೆಗೆ 213.20 ಕೋಟಿ ಕೋವಿಡ್‌ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.