ತುಮಕೂರಿನ ಕೇಂದ್ರೀಯ ವಿದ್ಯಾಲಯ ಶಿಕ್ಷಕಿ ಪೊನಶಂಕರಿಗೆ ರಾಷ್ಟ್ರಪ್ರಶಸ್ತಿ: ರಾಷ್ಟ್ರಪತಿಗಳಿಂದ ಪ್ರದಾನ
ಜೀವನದಲ್ಲಿ ವಿದ್ಯೆ, ಗುರಿಯನ್ನು ತೋರಿಸುವ ಶಿಕ್ಷಕರಿಗೆ ಗೌರವ ಸಲ್ಲಿಸುವ, ಗುರಗಳಿಗೆ ಮೀಸಲಾದ ದಿನ ಇಂದು ಸೆಪ್ಟೆಂಬರ್ 5 ಶಿಕ್ಷಕರ ದಿನ. ಶಿಕ್ಷಣ, ಶಿಕ್ಷಕ ಹುದ್ದೆಯಲ್ಲಿ ವಿಶೇಷ ಸಾಧನೆ, ಅದ್ವಿತೀಯ ಕೆಲಸ ಮಾಡಿದ ಶಿಕ್ಷಕರನ್ನು ಗುರುತಿಸಿ ರಾಷ್ಟ್ರಮಟ್ಟದಲ್ಲಿ ಹಾಗೂ ಆಯಾ ರಾಜ್ಯ ಸರ್ಕಾರಗಳು ಗೌರವಿಸುತ್ತವೆ.

ನವದೆಹಲಿ/ಬೆಂಗಳೂರು: ಜೀವನದಲ್ಲಿ ವಿದ್ಯೆ, ಗುರಿಯನ್ನು ತೋರಿಸುವ ಶಿಕ್ಷಕರಿಗೆ ಗೌರವ ಸಲ್ಲಿಸುವ, ಗುರಗಳಿಗೆ ಮೀಸಲಾದ ದಿನ ಇಂದು ಸೆಪ್ಟೆಂಬರ್ 5 ಶಿಕ್ಷಕರ ದಿನ. ಶಿಕ್ಷಣ, ಶಿಕ್ಷಕ ಹುದ್ದೆಯಲ್ಲಿ ವಿಶೇಷ ಸಾಧನೆ, ಅದ್ವಿತೀಯ ಕೆಲಸ ಮಾಡಿದ ಶಿಕ್ಷಕರನ್ನು ಗುರುತಿಸಿ ರಾಷ್ಟ್ರಮಟ್ಟದಲ್ಲಿ ಹಾಗೂ ಆಯಾ ರಾಜ್ಯ ಸರ್ಕಾರಗಳು ಗೌರವಿಸುತ್ತವೆ.
ರಾಷ್ಟ್ರಮಟ್ಟದಲ್ಲಿ ಕೊಡಮಾಡುವ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಕರ್ನಾಟಕ ರಾಜ್ಯದಿಂದ 2022ನೇ ಸಾಲಿನಲ್ಲಿ ಇಬ್ಬರು ಆಯ್ಕೆಯಾಗಿದ್ದಾರೆ. ಅವರಲ್ಲಿ ಒಬ್ಬರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಮೃತಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಉಮೇಶ್ ಹಾಗೂ ತುಮಕೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಜೀವಶಾಸ್ತ್ರ ವಿಭಾಗದ ಶಿಕ್ಷಕಿ ವಿ ಪೊನಶಂಕರಿ.
ಕಳೆದ 27 ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿರುವ ಪೊನಶಂಕರಿ ಪ್ರಸ್ತುತ 2019ರಿಂದ ತುಮಕೂರಿನಲ್ಲಿ ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಮೂಲತಃ ತಮಿಳುನಾಡಿನ ಕನ್ಯಾಕುಮಾರಿಯವರಾದ ಇವರು ಗುಜರಾತ್‌ನಲ್ಲೂ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರಿನ ಯಶವಂತಪುರದ ಐಐಎಸ್‌ಸಿ ಕೇಂದ್ರೀಯ ವಿದ್ಯಾಲಯದಲ್ಲಿ 12 ವರ್ಷ ಕೆಲಸ ಮಾಡಿದ್ದಾರೆ.ಈ ಶಾಲೆಯಲ್ಲಿರುವಾಗ ಮಾಡಿರುವ ಹಲವು ಅತ್ಯಪೂರ್ವ ಕೆಲಸಗಳೇ ತಮ್ಮನ್ನು ಉತ್ತಮ ಶಿಕ್ಷಕಿ ಪ್ರಶಸ್ತಿ ಅರಸಿಕೊಂಡು ಬಂದಿದೆ ಎನ್ನುತ್ತಾರೆ. ಇವರು ಮುಂದಿನ ವರ್ಷ ಏಪ್ರಿಲ್ ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.
ಶಿಕ್ಷಕರಿಗೆ ನೀಡುವ ರಾಷ್ಟ್ರೀಯ ಪ್ರಶಸ್ತಿಗಳ ಉದ್ದೇಶವು ತಮ್ಮ ಬದ್ಧತೆ ಮತ್ತು ಕಠಿಣ ಪರಿಶ್ರಮದ ಮೂಲಕ ಶಾಲಾ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವುದಲ್ಲದೆ ತಮ್ಮ ವಿದ್ಯಾರ್ಥಿಗಳ ಜೀವನವನ್ನು ಶ್ರೀಮಂತಗೊಳಿಸಿರುವ ದೇಶದ ಕೆಲವು ಅತ್ಯುತ್ತಮ ಶಿಕ್ಷಕರ ಅನನ್ಯ ಕೊಡುಗೆಯನ್ನು ಗೌರವಿಸುವುದಾಗಿದೆ.
ರಾಷ್ಟ್ರಪತಿಗಳಿಂದ ಗೌರವ: ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


