ಪ್ರಧಾನಿ ಹುದ್ದೆಯ ಅಪೇಕ್ಷೆ ಇಲ್ಲ, ವಿಪಕ್ಷಗಳನ್ನು ಒಗ್ಗೂಡಿಸುವ ಸಂದರ್ಭ ಇದು: ನಿತೀಶ್ ಕುಮಾರ್
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ನಾಯಕತ್ವ ವಹಿಸಿಕೊಳ್ಳುವ ನಿಟ್ಟಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದ್ದಾರೆ ಎಂಬ ಊಹಾಪೋಹಗಳ ನಡುವೆ ತಾನೂಪ್ರಧಾನಿ ಹುದ್ದೆಯ ಹಕ್ಕುದಾರನೂ ಅಲ್ಲ ಅಥವಾ ಅದರ ಅಪೇಕ್ಷೆಯೂ ಇಲ್ಲ ಎಂದು ಅವರು ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ನಾಯಕತ್ವ ವಹಿಸಿಕೊಳ್ಳುವ ನಿಟ್ಟಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದ್ದಾರೆ ಎಂಬ ಊಹಾಪೋಹಗಳ ನಡುವೆ ತಾನೂ ಪ್ರಧಾನಿ ಹುದ್ದೆಯ ಹಕ್ಕುದಾರನೂ ಅಲ್ಲ ಅಥವಾ ಅದರ ಅಪೇಕ್ಷೆಯೂ ಇಲ್ಲ ಎಂದು ಅವರು ಮಂಗಳವಾರ ಹೇಳಿದ್ದಾರೆ.
ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಎಡಪಕ್ಷಗಳು, ಕಾಂಗ್ರೆಸ್ ಹಾಗೂ ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಿ, ವಿಪಕ್ಷಗಳನ್ನು ಒಗ್ಗೂಡಿಸುವ ಸಂದರ್ಭ ಇದಾಗಿದೆ ಎಂದರು.
ಚಿಕ್ಕಂದಿನಿಂದಲೂ ಸಿಪಿಐ (ಎಂ) ನೊಂದಿಗೆ ಧೀರ್ಘ ಸಂಬಂಧ ಹೊಂದಿದ್ದೇನೆ. ನೀವೆಲ್ಲರೂ ನನ್ನನ್ನು ನೋಡಿಲ್ಲ, ಆದರೆ ನಾನು ದೆಹಲಿಗೆ ಬಂದಾಗಲೆಲ್ಲಾ ನಾನು ಈ ಕಚೇರಿಗೆ ಬರುತ್ತಿದ್ದೆ. ಇಂದು ನಾವೆಲ್ಲರೂ ಮತ್ತೆ ಒಟ್ಟಿಗೆ ಇದ್ದೇವೆ. ಎಲ್ಲಾ ಎಡಪಕ್ಷಗಳು, ಪ್ರಾದೇಶಿಕ ಪಕ್ಷಗಳು, ಕಾಂಗ್ರೆಸ್ ಅನ್ನು ಒಗ್ಗೂಡಿಸುವುದು ನಮ್ಮ ಸಂಪೂರ್ಣ ಗಮನ ನೀಡಲಾಗುವುದು,ಒಂದುವೇಳೆ ನಾವೆಲ್ಲರೂ ಒಗ್ಗೂಡಿದರೆ ಇದು ದೊಡ್ಡ ವಿಷಯವಾಗಲಿದೆ ಎಂದು ಅವರು ಹೇಳಿದರು. ಪ್ರಧಾನಿಯಾಗುವ ಆಕಾಂಕ್ಷೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿತೀಶ್ ಕುಮಾರ್ "ಇದು ತಪ್ಪು. ನಾನು ಆ ಹುದ್ದೆಗೆ ಹಕ್ಕುದಾರನೂ ಅಲ್ಲ, ಅದರ ಅಪೇಕ್ಷೆಯೂ ಇಲ್ಲ ಎಂದು ಹೇಳಿದರು.
ನಿತೀಶ್ ಕುಮಾರ್ ಪ್ರತಿಪಕ್ಷಗಳ ಕೂಟಕ್ಕೆ ವಾಪಸ್ ಆಗಿದ್ದು, ಬಿಜೆಪಿ ವಿರುದ್ಧದ ಹೋರಾಟದ ಭಾಗವಾಗಬೇಕೆಂಬ ಅವರ ಬಯಕೆ ಭಾರತದ ರಾಜಕೀಯಕ್ಕೆ ಉತ್ತಮ ಸಂಕೇತವಾಗಿದೆ ಎಂದು ಯೆಚೂರಿ ಹೇಳಿದ್ದಾರೆ. ಎಲ್ಲಾ ಪಕ್ಷಗಳನ್ನು ಒಗ್ಗೂಡಿಸುವುದು ಮೊದಲ ಅಜೆಂಡಾ, ಪ್ರಧಾನಿ ಅಭ್ಯರ್ಥಿ ನಿರ್ಧರಿಸಿಲ್ಲ, ಸಮಯ ಬಂದಾಗ ಪ್ರಧಾನಿ ಅಭ್ಯರ್ಥಿ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು,
ಸೋಮವಾರ ನವದೆಹಲಿಗೆ ಆಗಮಿಸಿದ ನಿತೀಶ್ ಕುಮಾರ್ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಶರದ್ ಪವಾರ್, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್ ಸೇರಿದಂತೆ ಹಲವು ಮುಖಂಡರನ್ನು ಭೇಟಿಯಾಗುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


