ಪಂಜಾಬ್: ಕಾಂಗ್ರೆಸ್ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ರಾಜೀನಾಮೆ
ಪಂಜಾಬ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಬಲವೀರ್ ರಾಣಿ ಸೋಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ.

ಚಂಡೀಗಢ: ಪಂಜಾಬ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಬಲವೀರ್ ರಾಣಿ ಸೋಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ.
ಕೌಟುಂಬಿಕ ಕಾರಣದಿಂದಾಗಿ ಹುದ್ದೆಯಲ್ಲಿ ಮುಂದುವರೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಆ ಹುದ್ದೆಯಿಂದ ತೆರವುಗೊಳಿಸುವಂತೆ ಸೋಧಿ ಪತ್ರದಲ್ಲಿ ಬರೆದಿದ್ದಾರೆ. ಆದರೆ, ಅವರು ಪಕ್ಷಕ್ಕೆ ನಿಷ್ಠರಾಗಿರುತ್ತಾರೆ ಎಂದು ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದಾರೆ. ಪತ್ರದ ಪ್ರತಿಯನ್ನು ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷೆ ನೀತಾ ಡಿಸೋಜಾ ಅವರಿಗೂ ಕಳುಹಿಸಲಾಗಿದೆ.
ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಆರಂಭಕ್ಕೂ ಮುನ್ನಾ ಅವರು ರಾಜೀನಾಮೆ ನೀಡಿದ್ದಾರೆ. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರೊಂದಿಗೆ ಯಾವುದೇ ಯಾವುದೇ ಭಿನ್ನಾಭಿಪ್ರಾಯವಿಲ್ಲ ಮತ್ತು ಕೌಟುಂಬಿಕ ಕಾರಣದಿಂದ ರಾಜೀನಾಮೆ ನೀಡಿದ್ದೇನೆ ಎಂದು ಸೋಧಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


