ಉತ್ತರ ಪ್ರದೇಶ: ಹೃದಯಾಘಾತದಿಂದ ಬಿಜೆಪಿ ಶಾಸಕ ಅರವಿಂದ್ ಗಿರಿ ನಿಧನ; ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ
ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಲಖೀಂಪುರ ಖೇರಿಯ ಗೋಕರ್ಣನಾಥ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ್ ಗಿರಿ ನಿಧನರಾಗಿದ್ದಾರೆ.

ಲಕ್ನೋ: ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಲಖೀಂಪುರ ಖೇರಿಯ ಗೋಕರ್ಣನಾಥ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ್ ಗಿರಿ ನಿಧನರಾಗಿದ್ದಾರೆ.
ಐದು ಬಾರಿ ಶಾಸಕರಾಗಿದ್ದ ಅರವಿಂದ್ ಗಿರಿ(64) ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಲಖೀಂಪುರ ಖೇರಿಯ ಗೋಖರನಾಥ್ ವಿಧಾನಸಭಾ ಕ್ಷೇತ್ರದಿಂದ ಇವರು ಸ್ಪರ್ಧಿಸುತ್ತಿದ್ದರು.
ಅರವಿಂದ ಗಿರಿ ಅವರ ನಿಧನದ ಸುದ್ದಿಯನ್ನು ಅವರ ಹಿರಿಯ ಸಹೋದರ ಮಧುಸೂದನ್ ಗಿರಿ ಖಚಿತಪಡಿಸಿದ್ದಾರೆ. ಇಂದು ಬೆಳಗ್ಗೆ ಆರೋಗ್ಯವಾಗಿದ್ದ ಅವರು ಲಖನೌಗೆ ತೆರಳುತ್ತಿದ್ದರು. ಈ ವೇಳೆ ದಾರಿಮಧ್ಯೆ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಶಾಸಕರ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಲಖಿಂಪುರ ಖೇರಿ ಜಿಲ್ಲೆಯ ಗೋಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ್ ಗಿರಿ ಅವರ ಸಾವು ಅತ್ಯಂತ ದುಃಖಕರವಾಗಿದೆ. ನನ್ನ ಸಂತಾಪವು ದುಃಖಿತ ಕುಟುಂಬಗಳೊಂದಿಗೆ ಇರುತ್ತದೆ. ಭಗವಾನ್ ಶ್ರೀರಾಮನು ಅಗಲಿದ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ದುಃಖಿತ ಕುಟುಂಬ ಸದಸ್ಯರಿಗೆ ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ. ಶಾಂತಿ!' ಎಂದು ಯೋಗಿ ಆದಿತ್ಯನಾಥ್ ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


