ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಗೆ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ ಸದ್ಯದಲ್ಲೆ!
ಸಾಮಾಜಿಕ ಜಾಲತಾಣಗಳಲ್ಲಿ ಉತ್ಪನ್ನಗಳನ್ನು ಪ್ರಚಾರ ಮಾಡುವ ಪ್ರಭಾವಿಗಳಿಗೆ ಸರ್ಕಾರ ಶೀಘ್ರವೇ ಮಾರ್ಗಸೂಚಿಗಳನ್ನು ಜಾರಿಗೊಳಿಸಲಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಉತ್ಪನ್ನಗಳನ್ನು ಪ್ರಚಾರ ಮಾಡುವ ಪ್ರಭಾವಿಗಳಿಗೆ ಸರ್ಕಾರ ಶೀಘ್ರವೇ ಮಾರ್ಗಸೂಚಿಗಳನ್ನು ಜಾರಿಗೊಳಿಸಲಿದೆ.
ಸರ್ಕಾರದ ಮಾರ್ಗಸೂಚಿ ಜಾರಿಗೆ ಬಂದ ನಂತರ ಸಾಮಾಜಿಕ ಜಾಲತಾಣದಲ್ಲಿನ ಪ್ರಭಾವಿಗಳು (Social Media influncers) ಪ್ರಚಾರ ಮಾಡುವ ಉತ್ಪನ್ನಗಳೊಂದಿಗೆ ಅವರ ಜತೆಗಾರಿಕೆಯನ್ನು ಘೋಷಿಸಿಕೊಳ್ಳುವುದು ಕಡ್ಡಾಯವಾಗಲಿದೆ.
ಗ್ರಾಹಕ ವ್ಯವಹಾರಗಳ ಇಲಾಖೆ ಈ ಮಾರ್ಗಸೂಚಿಗಳನ್ನು ಪ್ರಕಟಿಸಲಿದ್ದು, ಯಾವುದನ್ನು ಮಾಡಬಹುದು ಮತ್ತು ಯಾವುದನ್ನು ಮಾಡಬಾರದು ಎಂಬುದನ್ನು ನಿರ್ಧರಿಸುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ, ಸಾಮಾಜಿಕ ಜಾಲತಾಣಗಳ ಪ್ರಭಾವಿಗಳು ಉತ್ಪನ್ನಗಳನ್ನು ಪ್ರಚಾರ ಮಾಡುವುದಕ್ಕಾಗಿ ಬ್ರಾಂಡ್ ಗಳಿಂದ ಹಣವನ್ನು ಪಡೆಯುತ್ತಿದ್ದಾರೆ.
ಹಣ ಪಡೆದು ಉತ್ಪನ್ನಗಳನ್ನು ಪ್ರಚಾರ ಮಾಡುವವರು ಆ ಸಂಸ್ಥೆಯೊಂದಿಗಿನ ಜತೆಗಾರಿಕೆಯನ್ನು ಘೋಷಿಸಿಕೊಳ್ಳಬೇಕು ಹಾಗೂ ಅನುಮೋದಿಸುವ ಉತ್ಪನ್ನಗಳಿಗೆ ಸಂಬಂಧಿಸಿದ ಪೋಸ್ಟ್ ನಲ್ಲಿ ಡಿಸ್ಕ್ಲೈಮರ್ ಗಳನ್ನು ಹಾಕಬೇಕು ಎಂಬುದು ಮಾರ್ಗಸೂಚಿಯ ಪ್ರಮುಖ ಅಂಶವಾಗಿರಲಿದ್ದು, ಮುಂದಿನ 15 ದಿನಗಳಲ್ಲಿ ಮಾರ್ಗಸೂಚಿ ಪ್ರಕಟಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


