ಕೋವಿಡ್-19: ಕಳೆದ 24 ಗಂಟೆಗಳಲ್ಲಿ 6,093 ಹೊಸ ಪ್ರಕರಣ, ಕೇರಳದಲ್ಲಿ 13 ಸೇರಿ 31 ಮಂದಿ ಸಾವು
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,093 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,84,729ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,093 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,84,729ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 49,636ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 13 ಜನರು ಸೇರಿದಂತೆ 31 ಮಂದಿ ಸಾವಿಗೀಡಾಗಿದ್ದು, ಒಟ್ಟು 5,28,090 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.11 ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು ಶೇ 98.70 ರಷ್ಟಿದೆ. ಸದ್ಯ ದೇಶದಾದ್ಯಂತ 4,39,06,972 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಇದೇ ವೇಳೆ ದೈನಂದಿನ ಪಾಸಿಟಿವಿಟಿ ದರ ಶೇ 1.93ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 1.88 ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ 214.55 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


