ಬ್ರಿಟನ್ ರಾಣಿ ಎಲಿಜಬೆತ್ II ನಿಧನ: ಭಾರತದಾದ್ಯಂತ ಸೆ.11ರಂದು ಶೋಕಾಚರಣೆ!
ಬ್ರಿಟನ್ ರಾಣಿ ಎಲಿಜಬೆತ್ II ಅವರ ನಿಧನದ ಹಿನ್ನೆಲೆಯಲ್ಲಿ ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.

ನವದೆಹಲಿ: ಬ್ರಿಟನ್ ರಾಣಿ ಎಲಿಜಬೆತ್ II ಅವರ ನಿಧನದ ಹಿನ್ನೆಲೆಯಲ್ಲಿ ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.
ಗೃಹ ವ್ಯವಹಾರಗಳ ಸಚಿವಾಲಯವು, 'ಕ್ವೀನ್ ಎಲಿಜಬೆತ್ II, ಯುನೈಟೆಡ್ ಕಿಂಗ್‌ಡಮ್ ಆಫ್ ಗ್ರೇಟ್ ಬ್ರಿಟನ್ ಮತ್ತು ಉತ್ತರ ಐರ್ಲೆಂಡ್ 8 ನೇ ಸೆಪ್ಟೆಂಬರ್ 2022 ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರವು ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಿರ್ಧರಿಸಿದೆ ಎಂದು ಹೇಳಿದೆ.
ಶೋಕಾಚರಣೆಯ ದಿನದಂದು, ಭಾರತದಾದ್ಯಂತ ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ಅರ್ಧಕ್ಕೆ ಹಾರಿಸಲಾಗುತ್ತದೆ ಮತ್ತು ದಿನದಂದು ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.
ಯುಕೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ರಾಣಿ ಎಲಿಜಬೆತ್ II ಗುರುವಾರ ತಮ್ಮ 96ನೇ ವಯಸ್ಸಿನಲ್ಲಿ ನಿಧನರಾದ ಹಿನ್ನೆಲೆ ಜಗತ್ತಿನಾದ್ಯಂತ ಗಣ್ಯರು ಸಂತಾಪ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


