ದೇಶ

ಛತ್ತೀಸಗಡ: ಕೊರಬದಲ್ಲಿ ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ, 7 ಮಂದಿ ದಾರುಣ ಸಾವು; ಮೂವರಿಗೆ ಗಾಯ

ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ

ಛತ್ತೀಸಗಡ: ಕೊರಬದಲ್ಲಿ ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ, 7 ಮಂದಿ ದಾರುಣ ಸಾವು; ಮೂವರಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ಕೊರಬಾ: ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ಛತ್ತೀಸಗಡ ರಾಜಧಾನಿ ರಾಯ್‌ಪುರದಿಂದ ಸರ್‌ಗುಜ ಜಿಲ್ಲೆಗೆ ಸಂಚರಿಸುತ್ತಿತ್ತು. ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮಡಾಯಿ ಘಾಟಿ ಬಳಿ ಇಂದು ಮುಂಜಾನೆ ಸುಮಾರು 4 ಗಂಟೆಗೆ ಅವಘಡ ಸಂಭವಿಸಿದೆ ಎಂದು ಕೊರಬಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ಮುಂಭಾಗದಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಏಳು ಮಂದಿ ಬಸ್ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.