ರಾಜಸ್ಥಾನದಲ್ಲಿ ಭಾರೀ ಮಳೆ: ಸಿಡಿಲಿಗೆ 7 ಮಂದಿ ಬಲಿ, ನಾಲ್ವರಿಗೆ ಗಾಯ
ರಾಜಸ್ಥಾನದ ಜಲಾವರ್ ಮತ್ತು ಉದಯಪುರ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೈಪುರ: ರಾಜಸ್ಥಾನದ ಜಲಾವರ್ ಮತ್ತು ಉದಯಪುರ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆಯಿಂದ ಸಂಜೆ 5.30ರವರೆಗೆ ಶ್ರೀಗಂಗಾನಗರದಲ್ಲಿ 34, ಬಾರ್ಮರ್‌ನಲ್ಲಿ 30.6, ದುಗರ್‌ಪುರದಲ್ಲಿ 13, ಬೂಂದಿಯಲ್ಲಿ 11ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಅಸ್ನಾವರ್, ಖಾನ್‌ಪುರ, ಮಂದಾವರ್ ಮತ್ತು ಡಾಂಗಿಪುರದಲ್ಲಿ ಶನಿವಾರ ಸಿಡಿಲು ಬಡಿದ ಸಾವುಗಳು ವರದಿಯಾಗಿವೆ ಎಂದು ಅವರು ತಿಳಿಸಿದ್ದಾರೆ. ಭಾನುವಾರ ಸಂಜೆ ಜಬ್ಲಾ ಗ್ರಾಮದಲ್ಲಿ ಸಿಡಿಲು ಬಡಿದು ಮನೀಶ್, ಮನೀಶಾ ಮತ್ತು ಬಾಲಕಿ ಹಾಕಾ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಉದಯಪುರ ಜಿಲ್ಲೆಯ ತಿಡಿ ಎಸ್‌ಎಚ್‌ಒ ಗೋಪಾಲ್ ಕೃಷ್ಣ ತಿಳಿಸಿದ್ದಾರೆ.
ಹವಾಮಾನ ಇಲಾಖೆಯ ಪ್ರಕಾರ, ಈ ಅವಧಿಯಲ್ಲಿ ಬನ್ಸ್ವಾರದ ಜಗಪುರದಲ್ಲಿ 8 ಸೆಂ.ಮೀ, ಕೋಟಾದ ಸಂಗೋಡ್‌ನಲ್ಲಿ 5 ಸೆಂ.ಮೀ., ಜಲಾವರದ ಅಕ್ಲೇರಾದಲ್ಲಿ 5 ಸೆಂ.ಮೀ. ಡುಂಗರಪುರದ ನಿತುವದಲ್ಲಿ 5 ಸೆಂ.ಮೀ. ಡುಂಗರಪುರದ ವೆಜಾದಲ್ಲಿ 4 ಸೆಂ.ಮೀ ಮಳೆ ದಾಖಲಾಗಿದೆ. ಪ್ರತಾಪಗಢದ ಪೀಪಲ್‌ಖಂಟ್‌ನಲ್ಲಿ 4 ಸೆಂ.ಮೀ. ಮಳೆಯಾಗಿದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


