ಡ್ರಗ್ಸ್ ಸೇವನೆ: ಅರೆಪ್ರಜ್ಞಾವಸ್ಥೆಯಲ್ಲಿ ನಡುರಸ್ತೆಯಲ್ಲಿ ನಿಂತ ಯುವತಿಯ ವಿಡಿಯೋ ವೈರಲ್, ತನಿಖೆಗೆ ಆದೇಶ
ಡ್ರಗ್ಸ್ ಪ್ರಭಾವಕ್ಕೊಳಗಾದ ಯುವತಿಯೊಬ್ಬಳು ನಡುರಸ್ತೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪಂಜಾಬ್ನ ಅಮೃತಸರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಅಮೃತಸರ: ಡ್ರಗ್ಸ್ ಪ್ರಭಾವಕ್ಕೊಳಗಾದ ಯುವತಿಯೊಬ್ಬಳು ನಡುರಸ್ತೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪಂಜಾಬ್ನ ಅಮೃತಸರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಅಮೃತಸರ ಪೂರ್ವ ಕ್ಷೇತ್ರದ ಮಕ್ಬೂಲ್ಪುರ ಪ್ರದೇಶದಲ್ಲಿ ಸೆರೆಹಿಡಿಯಲಾದ ವಿಡಿಯೋದಲ್ಲಿ ಯುವತಿಯೊಬ್ಬಳು ರಸ್ತೆಯ ಮೇಲೆ ನಿಂತಿದ್ದು, ಒರಗಿಕೊಂಡು ಚಲಿಸಲು ಹೆಣಗಾಡುತ್ತಿರುವುದನ್ನು ಕಾಣಬಹುದು. ಈ ಪ್ರದೇಶವು ಮಾದಕ ವ್ಯಸನ ಮತ್ತು ವ್ಯಸನಿಗಳ ಸಮಸ್ಯೆಗಳಿಗೆ ಕುಖ್ಯಾತವಾಗಿದೆ.
ವೀಡಿಯೊ ವೈರಲ್ ಆದ ನಂತರ, ಮಕ್ಬೂಲ್ ಪುರ ಪೊಲೀಸರು ಭಾನುವಾರ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯ ಸಮಯದಲ್ಲಿ, ಪೊಲೀಸರು ಮೂವರಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡರು.
ಈ ಸಂಬಂಧ ಪೊಲೀಸರು ಪ್ರತ್ಯೇಕ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಅನುಮಾನಾಸ್ಪದ ಚಟುವಟಿಕೆಗಳ ಕಾರಣ 12 ಮಂದಿಯನ್ನು ತನಿಖೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಪ್ರದೇಶದಿಂದ ಕಳವು ಮಾಡಿರುವ ಶಂಕಿತ ಐದು ವಾಹನಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಅಮೃತಸರ ಪೂರ್ವ ಕ್ಷೇತ್ರವನ್ನು ಪ್ರತಿನಿಧಿಸುವ ಎಎಪಿ ಶಾಸಕಿ ಜೀವನಜೋತ್ ಕೌರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


