ಜಾಮೀನು ಸಿಕ್ಕರೂ ಪತ್ರಕರ್ತ ಸಿದ್ದಿಕಿ ಕಪ್ಪನ್ ಗೆ ಇಲ್ಲ ಬಿಡುಗಡೆ ಭಾಗ್ಯ
ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರೂ ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ. ಕಪ್ಪನ್ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಪ್ರಕರಣ ಇನ್ನೂ ಬಾಕಿ ಉಳಿದಿರುವ ಕಾರಣ...

ಲಖನೌ: ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರೂ ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ. ಕಪ್ಪನ್ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಪ್ರಕರಣ ಇನ್ನೂ ಬಾಕಿ ಉಳಿದಿರುವ ಕಾರಣ ಅವರು ಜೈಲಿನಲ್ಲಿಯೇ ಇರಲಿದ್ದಾರೆ ಎಂದು ಕಾರಾಗೃಹ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
2020ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಹಾಥರಸ್‌ಗೆ ತೆರಳುತ್ತಿದ್ದಾಗ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರಿಗೆ ಕಳೆದ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆದರೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಪ್ರಕರಣ ಇನ್ನೂ ಬಾಕಿಯಿರುವುದರಿಂದ ಕಪ್ಪನ್ ಜೈಲಿನಲ್ಲಿಯೇ ಉಳಿಯಲಿದ್ದಾರೆ ಎಂದು ಜೈಲಿನ ಡಿಜಿ ಪ್ರೊ ಸಂತೋಷ್ ವರ್ಮಾ ಅವರು ಪಿಟಿಐಗೆ ತಿಳಿಸಿದ್ದಾರೆ.
ಕಪ್ಪನ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ(ಎಎಸ್ಜೆ) ಅನುರೋಧ್ ಮಿಶ್ರಾ ಅವರು ಅವರಿಗೆ ತಲಾ 1 ಲಕ್ಷ ರೂ.ಗಳ ಎರಡು ಶ್ಯೂರಿಟಿ ಮತ್ತು ಅದೇ ಮೊತ್ತದ ವೈಯಕ್ತಿಕ ಬಾಂಡ್ ಅನ್ನು ಒದಗಿಸುವಂತೆ ಸೂಚಿಸಿದ್ದರು.
ಸುಮಾರು ಎರಡು ವರ್ಷಗಳ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ನ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಉತ್ತರ ಪ್ರದೇಶದ ಪೊಲೀಸರು ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರನ್ನು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


