ಭಾರತದ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತೆ ಕಮ್ ಬ್ಯಾಕ್: ವರದಿ
ಪ್ರಮುಖ ಬೆಳವಣಿಗೆಯಲ್ಲಿ ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮರಳಲಿದ್ದಾರೆ ಎಂದು ಹೇಳಲಾಗಿದೆ.

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮರಳಲಿದ್ದಾರೆ ಎಂದು ಹೇಳಲಾಗಿದೆ.
ಹಾಲಿ ಎಜಿ ಕೆ ಕೆ ವೇಣುಗೋಪಾಲ್ ಅವರ ಅವಧಿ ಸೆಪ್ಟೆಂಬರ್ 30 ರಂದು ಕೊನೆಗೊಳ್ಳಲಿರುವುದರಿಂದ ಅವರ ಸ್ಥಾನಕ್ಕೆ ಈ ಹಿಂದೆ ಅಟಾರ್ನಿ ಜನರಲ್ ಆಗಿ ಕಾರ್ಯ ನಿರ್ವಹಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನೇ ಮರು ಆಯ್ಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಅದರಂತೆ ಇದೇ ಅಕ್ಟೋಬರ್ 1ರಿಂದಲೇ ಮುಕುಲ್ ರೋಹ್ಟಗಿ ಅವರು ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಲಾಗಿದೆ. ಆ ಮೂಲಕ ರೋಹಟಗಿ ಅವರು ದೇಶದ 14ನೇ ಅಟಾರ್ನಿ ಜನರಲ್ (ಎ.ಜಿ) ಆಗಿ ನೇಮಕವಾಗಲಿದ್ದಾರೆ.
ರೋಹಟಗಿ ಅವರಿಗೆ ಇದು ಎರಡನೇ ಅವಧಿಯಾಗಿದ್ದು, ಇದಕ್ಕೂ ಮೊದಲು 2014ರ ಜೂನ್‌ನಿಂದ 2017ರ ಜೂನ್ ವರೆಗೆ ಎಜಿಐ ಆಗಿ (ಅಟಾರ್ನಿ ಜನರಲ್) ಸೇವೆ ಸಲ್ಲಿಸಿದ್ದರು. ಬಳಿಕ ಆ ಸ್ಥಾನಕ್ಕೆ ಕೆ.ಕೆ. ವೇಣುಗೋಪಾಲ್ ನೇಮಕಗೊಂಡಿದ್ದರು. 91 ವರ್ಷದ ವೇಣುಗೋಪಾಲ್ ಅವರ ಕರ್ತವ್ಯದ ಅವಧಿ ಸೆಪ್ಟೆಂಬರ್ 30ಕ್ಕೆ ಮುಕ್ತಾಯವಾಗಲಿದೆ. ರೋಹ್ಟಗಿ ಅಕ್ಟೋಬರ್ 1 ರಿಂದ ಸೇವೆ ಆರಂಭಿಸಲಿದ್ದಾರೆ.
ರೋಹಟಗಿ ಅವರು ಈ ಹಿಂದೆ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಮತ್ತು ಐಷಾರಾಮಿ ಹಡಗಿನ ಡ್ರಗ್ಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಪರ ವಕಾಲತ್ತು ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


