ನರ್ಸರಿ ವಿದ್ಯಾರ್ಥಿನಿ ಮೇಲೆ ಶಾಲಾ ಬಸ್ ಚಾಲಕನಿಂದ ಅತ್ಯಾಚಾರ, ಈ ವೇಳೆ ಅಲ್ಲಿಯೇ ಇದ್ದ ಮಹಿಳಾ ಅಟೆಂಡೆಂಟ್!
ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಆಕೆಯ ಶಾಲಾ ಬಸ್ ಚಾಲಕ ವಾಹನದೊಳಗೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಆಕೆಯ ಶಾಲಾ ಬಸ್ ಚಾಲಕ ವಾಹನದೊಳಗೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಕಳೆದ ಗುರುವಾರ ಘಟನೆ ನಡೆದಾಗ ಮಹಿಳಾ ಅಟೆಂಡರ್ ಕೂಡ ವಾಹನದೊಳಗೆ ಇದ್ದರು ಎಂದು ಮಗುವಿನ ಪೋಷಕರು ಆರೋಪಿಸಿದ್ದು, ಬಸ್ ಚಾಲಕ ಮತ್ತು ಮಹಿಳಾ ಅಟೆಂಡರ್ ಅನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಶಾಲೆಯ ಆಡಳಿತ ಮಂಡಳಿಯು ಈ ವಿಷಯವನ್ನು ಮುಚ್ಚಿಡಲು ಪ್ರಯತ್ನಿಸಿದೆಯೇ ಎಂಬ ಪ್ರಶ್ನೆಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ, ಶಾಲೆಯ ಆಡಳಿತ ಮಂಡಳಿಯ ಪಾತ್ರದ ಬಗ್ಗೆ ತನಿಖೆ ನಡೆಸಲಾಗುವುದು. ವಿಚಾರಣೆ ಮತ್ತು ತನಿಖೆಯ ನಂತರ ಶಾಲಾ ಆಡಳಿತ ಮಂಡಳಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಗರದ ಪ್ರಮುಖ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿರುವ ಮಗು ಬಸ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ. ಬಾಲಕಿ ಮನೆಗೆ ಮರಳಿದ ನಂತರ, ತನ್ನ ಬ್ಯಾಗ್‌ನಲ್ಲಿ ಇರಿಸಲಾಗಿದ್ದ ಮತ್ತೊಂದು ಜೊತೆ ಬಟ್ಟೆಯಿಂದ ಮಗುವಿನ ಬಟ್ಟೆಯನ್ನು ಯಾರೋ ಬದಲಾಯಿಸಿದ್ದನ್ನು ಆಕೆಯ ತಾಯಿ ಗಮನಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನಂತರ ತಾಯಿ ತನ್ನ ಮಗಳ ಕ್ಲಾಸ್ ಟೀಚರ್ ಮತ್ತು ಶಾಲೆಯ ಪ್ರಾಂಶುಪಾಲರನ್ನು ವಿಚಾರಿಸಿದ್ದಾರೆ. ಆದರೆ, ಇಬ್ಬರೂ ಮಗುವಿನ ಬಟ್ಟೆಯನ್ನು ಬದಲಾಯಿಸಿಲ್ಲ ಎಂದಿದ್ದಾರೆ. ನಂತರ ಮಗು ತನ್ನ ಜನನಾಂಗದಲ್ಲಿ ನೋವಾಗುತ್ತಿರುವ ಬಗ್ಗೆ ಹೇಳಿದೆ. ಬಳಿಕ ನಡೆಸಿದ ಕೌನ್ಸೆಲಿಂಗ್‌ನಲ್ಲಿ ಬಸ್ ಚಾಲಕ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಮತ್ತು ಬಟ್ಟೆ ಬದಲಿಸಿದ್ದನ್ನು ಮಗು ತಿಳಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪೋಷಕರು ಶಾಲೆಯ ಆಡಳಿತ ಮಂಡಳಿಗೆ ದೂರು ನೀಡಲು ಮರುದಿನ ಶಾಲೆಗೆ ತೆರಳಿದಾಗ ಮಗು ಚಾಲಕನನ್ನು ಗುರುತಿಸಿದೆ ಎಂದು ಅಧಿಕಾರಿ ಹೇಳಿದರು.
ಬಾಲಕಿಯ ಪೋಷಕರು ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ. ಬಸ್ ಚಾಲಕ ಮತ್ತು ಮಹಿಳಾ ಅಟೆಂಡರ್ ಅನ್ನು ಬಂಧಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ನಿಧಿ ಸಕ್ಸೇನಾ ತಿಳಿಸಿದ್ದಾರೆ.
ಈಮಧ್ಯೆ, ಮಧ್ಯಪ್ರದೇಶದ ಕಾಂಗ್ರೆಸ್ ಮಾಧ್ಯಮ ವಿಭಾಗದ ಉಸ್ತುವಾರಿ ಕೆ.ಕೆ ಮಿಶ್ರಾ ಅವರು ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಹೆಣ್ಣುಮಕ್ಕಳು ಮತ್ತು ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿ ಸಚಿವ ನರೋತ್ತಮ್ ಮಿಶ್ರಾ ಅವರ ರಾಜೀನಾಮೆಗೆ ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


