ದೇಶ

ಶ್ರೀನಗರ: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಗಳು

ಕೇಂದ್ರಾಡಳಿತ ಪ್ರದೇಶ ಶ್ರೀನಗರದಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಗಳು
ಸಾಂದರ್ಭಿಕ ಚಿತ್ರ
Published On :

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಶ್ರೀನಗರದಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೊರೆತ ಖಚಿತ ಮಾಹಿತಿ ಆಧಾರದ ಮೇಲೆ, ಭದ್ರತಾ ಪಡೆಗಳು ನೌಗಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಡೇಂಜರ್‌ಪೋರಾದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದಾಗ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಎನ್‌ಕೌಂಟರ್‌ಗೆ ಕಾರಣವಾಯಿತು. ಇಲ್ಲಿಯವರೆಗೆ, ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಹತ್ಯೆಗೀಡಾದ ಭಯೋತ್ಪಾದಕರನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.