ಎಂಟು ಕಾಂಗ್ರೆಸ್ ಶಾಸಕರು ಯಾವುದೇ ಷರತ್ತುಗಳಿಲ್ಲದೆ ಬಿಜೆಪಿ ಸೇರಿದ್ದಾರೆ: ಗೋವಾ ಸಿಎಂ ಪ್ರಮೋದ್ ಸಾವಂತ್
ಕಾಂಗ್ರೆಸ್‌ನ ಎಂಟು ಶಾಸಕರು ಬೇಷರತ್ತಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬುಧವಾರ ಹೇಳಿದ್ದಾರೆ.

ಪಣಜಿ: ಕಾಂಗ್ರೆಸ್‌ನ ಎಂಟು ಶಾಸಕರು ಬೇಷರತ್ತಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬುಧವಾರ ಹೇಳಿದ್ದಾರೆ.
ರಾಜ್ಯ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಡೆ ಅವರೊಂದಿಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಾವಂತ್, 40 ಸದಸ್ಯ ಬಲದ ವಿಧಾನಸಭೆಯಲ್ಲಿ ಎಂಟು ಹೊಸ ಸದಸ್ಯರೊಂದಿಗೆ ಬಿಜೆಪಿಯ ಬಲ 28ಕ್ಕೆ ಏರಿದೆ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಸೇರಿದಂತೆ ಕಾಂಗ್ರೆಸ್‌ನ 11 ಶಾಸಕರ ಪೈಕಿ ಎಂಟು ಶಾಸಕರು ಇಂದು ಬಿಜೆಪಿ ಸೇರಿದ್ದಾರೆ ಎಂದು ಸಾವಂತ್ ಹೇಳಿದ್ದಾರೆ.
"ಇಂದಿನ ಬೆಳವಣಿಗೆಯೊಂದಿಗೆ, ಬಿಜೆಪಿ ಈಗ 33 ಶಾಸಕರ ಬೆಂಬಲವನ್ನು ಹೊಂದಿದೆ.(ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದ ಇಬ್ಬರು ಮತ್ತು ಮೂವರು ಪಕ್ಷೇತರರು ಸೇರಿದಂತೆ) ಈ 8 ಕಾಂಗ್ರೆಸ್ ಶಾಸಕರು ಬೇಷರತ್ತಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ" ಎಂದು ಸಾವಂತ್ ತಿಳಿಸಿದರು.
ಗೋವಾದಿಂದ 'ಕಾಂಗ್ರೆಸ್ ಛೋಡೋ ಯಾತ್ರೆ' ಆರಂಭವಾಗಿದೆ ಎಂದು ಹೇಳಿರುವ ಸಾವಂತ್, ಮುಂದಿನ ಚುನಾವಣೆಯಲ್ಲಿ ಗೋವಾದಲ್ಲಿ ಮತ್ತೊಂದು ಲೋಕಸಭಾ ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


