ಲಂಡನ್‌ನಲ್ಲಿ ನಡೆಯುವ ರಾಣಿ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 17 ರಿಂದ 19 ರವರೆಗೆ ಲಂಡನ್‌ಗೆ ಭೇಟಿ ನೀಡಲಿದ್ದು, ರಾಣಿ ಎಲಿಜಬೆತ್ II ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲಿದ್ದಾರೆ...

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 17 ರಿಂದ 19 ರವರೆಗೆ ಲಂಡನ್‌ಗೆ ಭೇಟಿ ನೀಡಲಿದ್ದು, ರಾಣಿ ಎಲಿಜಬೆತ್ II ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಬ್ರಿಟನ್ ರಾಣಿ ಎಲಿಜಬೆತ್ II ಅವರು ಸೆಪ್ಟೆಂಬರ್ 8 ರಂದು ನಿಧನರಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಖರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ಅವರ ಸಂತಾಪ ಸೂಚಿಸಿದ್ದಾರೆ.
ಭಾರತದ ಸಂತಾಪವನ್ನು ತಿಳಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸೆಪ್ಟೆಂಬರ್ 12 ರಂದು ಇಲ್ಲಿನ ಬ್ರಿಟಿಷ್ ಹೈಕಮಿಷನ್ ಕಚೇರಿಗೆ ಭೇಟಿ ನೀಡಿದ್ದರು. ಭಾರತ ಕೂಡ ಭಾನುವಾರ ರಾಷ್ಟ್ರೀಯ ಶೋಕಾಚರಣೆ ಆಚರಿಸಿತು.
ಬ್ರಿಟನ್ ರಾಣಿ ಎಲಿಜಬೆತ್ II ಅವರು ಕಾಮನ್‌ವೆಲ್ತ್‌ನ ಮುಖ್ಯಸ್ಥರಾಗಿ ವಿಶ್ವದಾದ್ಯಂತ ಲಕ್ಷಾಂತರ ಜನರ ಕಲ್ಯಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


