ದೇವೇಂದ್ರ ಫಡ್ನವಿಸ್ ಪತ್ನಿ ವಿರುದ್ಧ ಫೇಸ್‌ಬುಕ್‌ನಲ್ಲಿ ನಿಂದನೆ: ಮಹಿಳೆಯ ಬಂಧನ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರ ಫೇಸ್‌ಬುಕ್ ಪುಟದಲ್ಲಿ ನಿಂದನೀಯ ಮತ್ತು ಅಸಭ್ಯವಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ 50 ವರ್ಷದ ಮಹಿಳೆಯನ್ನು ಸೈಬರ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರ ಫೇಸ್‌ಬುಕ್ ಪುಟದಲ್ಲಿ ನಿಂದನೀಯ ಮತ್ತು ಅಸಭ್ಯವಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ 50 ವರ್ಷದ ಮಹಿಳೆಯನ್ನು ಸೈಬರ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಧಿತ ಮಹಿಳೆ ಸ್ಮೃತಿ ಪಾಂಚಾಲ್ ಎಂದು ಗುರುತಿಸಲಾಗಿದ್ದು, ಅವರು ಕಳೆದ ಎರಡು ವರ್ಷಗಳಿಂದ ಅಮೃತಾ ಫಡ್ನವಿಸ್ ಅವರ ಅಧಿಕೃತ ಸಾಮಾಜಿಕ ಮಾಧ್ಯಮ ಪುಟದಲ್ಲಿ ಅನೇಕ ನಕಲಿ ಖಾತೆಗಳನ್ನು ಬಳಸಿಕೊಂಡು ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪಾಂಚಾಲ್ ಅವರು 53 ನಕಲಿ ಫೇಸ್‌ಬುಕ್ ಐಡಿಗಳು ಮತ್ತು 13 ಜಿಮೇಲ್ ಖಾತೆಗಳನ್ನು ರಚಿಸಿದ್ದಾರೆ. ಇಲ್ಲಿನ ನ್ಯಾಯಾಲಯವು ಗುರುವಾರದವರೆಗೆ ಆಕೆಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಕೃತ್ಯದ ಹಿಂದಿನ ಆಕೆಯ ಉದ್ದೇಶದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಂಚಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


