ಪುಣೆ: ಒಂದು ತಾಸಿನೊಳಗೆ ಇಬ್ಬರು 19 ವರ್ಷದ ಬಾಲ್ಯ ಸ್ನೇಹಿತೆಯರು ಆತ್ಮಹತ್ಯೆ, ತನಿಖೆಗೆ ಆದೇಶ
ಒಂದೇ ಕಟ್ಟಡದಲ್ಲಿ ವಾಸವಾಗಿದ್ದ ಬಾಲ್ಯದ ಗೆಳತಿಯರಾದ 19 ವರ್ಷದ ಇಬ್ಬರು ಸ್ನೇಹಿತೆಯರು ಒಂದು ಗಂಟೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಪುಣೆ: ಒಂದೇ ಕಟ್ಟಡದಲ್ಲಿ ವಾಸವಾಗಿದ್ದ ಬಾಲ್ಯದ ಗೆಳತಿಯರಾದ 19 ವರ್ಷದ ಇಬ್ಬರು ಸ್ನೇಹಿತೆಯರು ಒಂದು ಗಂಟೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಹಾರಾಷ್ಟ್ರದ ಪುಣೆಯ ಹಡಪ್ಸರ್ ಪಟ್ಟಣದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಸಂಜೆ 6.30 ರ ಸುಮಾರಿಗೆ ಮಲಗುವ ಕೋಣೆಯಲ್ಲಿ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಅರವಿಂದ್ ಗೋಕುಲೆ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಈಕೆಯ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಶವಪರೀಕ್ಷೆಗೆ ಕಳುಹಿಸುತ್ತಿದ್ದಾಗ, ಯುವತಿಯ ಬಾಲ್ಯ ಸ್ನೇಹಿತೆ ರಾತ್ರಿ 7.30 ರ ಸುಮಾರಿಗೆ ನಾಲ್ಕು ಅಂತಸ್ತಿನ ಕಟ್ಟಡದ ಟೆರೇಸ್‌ನಿಂದ ಜಿಗಿದು ಮೃತಪಟ್ಟಿದ್ದಾಳೆ' ಎಂದು ಅವರು ಹೇಳಿದರು.
ಇದನ್ನೂ ಓದಿ: ಉತ್ತರ ಪ್ರದೇಶ: ಲಖಿಂಪುರ್ ನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಅಪ್ರಾಪ್ತ ಸೋದರಿಯರ ಶವ ಪತ್ತೆ
ಅವರಲ್ಲಿ ಒಬ್ಬರು ವಾಣಿಜ್ಯ ವಿದ್ಯಾರ್ಥಿ ಮತ್ತು ಇನ್ನೊಬ್ಬರು ಅನಿಮೇಷನ್ ಕೋರ್ಸ್ ಓದುತ್ತಿದ್ದರು. ಸದ್ಯ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಮತ್ತು ಆತ್ಮಹತ್ಯೆ ಹಿಂದಿನ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ತನಿಖೆಗೆ ಆದೇಶಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


