ದೇಶ

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ, ಕೇರಳದಲ್ಲಿ 20 ಸೇರಿ 34 ಮಂದಿ ಸಾವು

ದೇಶದಲ್ಲಿಂದು ಶೇ 25ರಷ್ಟು ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಮರಣ ಪ್ರಮಾಣವು ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ.

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ, ಕೇರಳದಲ್ಲಿ 20 ಸೇರಿ 34 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿಂದು ಶೇ 25ರಷ್ಟು ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಮರಣ ಪ್ರಮಾಣವು ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 6,422 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,16,479 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 46,389 ಸಕ್ರಿಯ ಪ್ರಕರಣಗಳು ಇವೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳದಲ್ಲಿ 20 ಮಂದಿ ಸೇರಿದಂತೆ ದೇಶದಾದ್ಯಂತ 34 ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಈವರೆಗೆ 528,250 ಜನರು ಮೃತಪಟ್ಟಿರುವುದಾಗಿ ಗುರುವಾರ ಸಚಿವಾಲಯ ಮಾಹಿತಿ ನೀಡಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 2.04ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ.

ಸೆಪ್ಟೆಂಬರ್ 14ರಂದು 3,109,550 ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದ್ದು, ಈವರೆಗೆ 215.9 ಕೋಟಿಗೂ ಅಧಿಕ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.