ಹೈದರಾಬಾದ್: ಇಬ್ಬರು ಯುವಕರಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ
ಅಪ್ರಾಪ್ತ ಬಾಲಕಿಯ ಮೇಲೆ ಆಕೆಗೆ ಪರಿಚಯವಿದ್ದ ಇಬ್ಬರು ಯುವಕರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಹೈದರಾಬಾದ್: ಅಪ್ರಾಪ್ತ ಬಾಲಕಿಯ ಮೇಲೆ ಆಕೆಗೆ ಪರಿಚಯವಿದ್ದ ಇಬ್ಬರು ಯುವಕರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ವಯಸ್ಕರಾಗಿರುವ ಇಬ್ಬರು ಆರೋಪಿಗಳು ಎರಡು ದಿನಗಳ ಹಿಂದೆ 14 ವರ್ಷದ ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಬುಧವಾರ ಆರೋಪಿಗಳು ಬಾಲಕಿಯನ್ನು ಬಿಟ್ಟು ಹೋದ ಬಳಿಕ ಬಾಲಕಿಯನ್ನು ಪತ್ತೆ ಮಾಡಲಾಗಿತ್ತು.
ಸೆಪ್ಟೆಂಬರ್ 13 ರಂದು ಬಾಲಕಿ ನಾಪತ್ತೆಯಾದಾಗ ಅಪಹರಣ ಪ್ರಕರಣ ದಾಖಲಿಸಲಾಗಿತ್ತು. ಈಗ ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಮಹಿಳೆಯರು ಮತ್ತು ಮಕ್ಕಳಿಗಾಗಿ ಇರುವ 'ಭರೋಸಾ' ಬೆಂಬಲ ಕೇಂದ್ರಕ್ಕೆ ಕಳುಹಿಸಲಾಗಿದೆ ಅವರು ತಿಳಿಸಿದ್ದಾರೆ.
ಇಬ್ಬರು ಯುವಕರನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


