ಶಾಸಕ ಜಿಗ್ನೇಶ್ ಮೇವಾನಿ, ಇತರ 19 ಮಂದಿಗೆ 6 ತಿಂಗಳ ಜೈಲು ಶಿಕ್ಷೆ
2016 ರ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಿಗ್ನೇಶ್ ಮೇವಾನಿ ಮತ್ತು ಇತರ 19 ಆರೋಪಿಗಳು ತಪ್ಪಿತಸ್ಥರು ಎಂದು ಶುಕ್ರವಾರ ತೀರ್ಪು ನೀಡಿದ ಅಹಮದಾಬಾದ್ ನ್ಯಾಯಾಲಯ, ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಅಹಮದಾಬಾದ್: 2016 ರ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಿಗ್ನೇಶ್ ಮೇವಾನಿ ಮತ್ತು ಇತರ 19 ಆರೋಪಿಗಳು ತಪ್ಪಿತಸ್ಥರು ಎಂದು ಶುಕ್ರವಾರ ತೀರ್ಪು ನೀಡಿದ ಅಹಮದಾಬಾದ್ ನ್ಯಾಯಾಲಯ, ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ಐಪಿಸಿಯ ಮೂರು ವಿಭಿನ್ನ ಸೆಕ್ಷನ್‌ಗಳ ಅಡಿಯಲ್ಲಿ ಮೂರು ವಿಭಿನ್ನ ಶಿಕ್ಷೆಗಳನ್ನು ನೀಡಿದ್ದು, ಒಂದರ ಅಡಿಯಲ್ಲಿ ಆರು ತಿಂಗಳ ಜೈಲು, ಮತ್ತೊಂದರ ಅಡಿಯಲ್ಲಿ 500 ರೂಪಾಯಿ ದಂಡ ಮತ್ತು ಮೂರನೆ ಸೆಕ್ಷನ್ ಅಡಿ 100 ರೂಪಾಯಿ ದಂಡ ವಿಧಿಸಲಾಗಿದೆ.
ಇದನ್ನು ಓದಿ: ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಜೈಲು ಶಿಕ್ಷೆ!
2016ರಲ್ಲಿ, ಮೇವಾನಿ ಮತ್ತು ಇತರರು ಗುಜರಾತ್ ವಿಶ್ವವಿದ್ಯಾಲಯದ ಕಾನೂನು ವಿಭಾಗಕ್ಕೆ ಡಾ ಬಾಬಾಸಾಹೇಬ್ ಅಂಬೇಡ್ಕರ್ ಭವನ ಎಂದು ಹೆಸರಿಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಆವರಣವನ್ನು ಧ್ವಂಸಗೊಳಿಸಲಾಗಿತ್ತು. ನಂತರ ಎಲ್ಲಾ ಪ್ರತಿಭಟನಾಕಾರರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಜಿಗ್ನೇಶ್ ಮೇವಾನಿ ಮತ್ತು ಇತರ 19 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


