ಗುವಾಹಟಿಯ ಐಐಟಿ ಹಾಸ್ಟೆಲ್ ನಲ್ಲಿ ಕೇರಳ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಗುವಾಹಟಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ, ಗುವಾಹಟಿ)ಯ ವಿದ್ಯಾರ್ಥಿಯೊಬ್ಬ ಶುಕ್ರವಾರ ರಾತ್ರಿ ತನ್ನ ಹಾಸ್ಟೆಲ್ ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಗುವಾಹಟಿ: ಗುವಾಹಟಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ, ಗುವಾಹಟಿ)ಯ ವಿದ್ಯಾರ್ಥಿಯೊಬ್ಬ ಶುಕ್ರವಾರ ರಾತ್ರಿ ತನ್ನ ಹಾಸ್ಟೆಲ್ ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸಂಸ್ಥೆಯು ವಿದ್ಯಾರ್ಥಿಯ ಹೆಸರನ್ನು ಬಹಿರಂಗಪಡಿಸಲಿಲ್ಲ. ಆದರೆ ಈ ವಿದ್ಯಾರ್ಥಿ ಕೇರಳದಿಂದ ಬಂದಿದ್ದು, ಬಿ.ಟೆಕ್ ಓದುತ್ತಿದ್ದ ಎಂದು ವರದಿಯಾಗಿದೆ.
ಪೊಲೀಸರು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಗುವಾಹಟಿಯ ಐಐಟಿ ಕ್ಯಾಂಪಸ್ನಲ್ಲಿ ಡಿಸೈನ್ ವಿಭಾಗದ ಅಂತಿಮ ವರ್ಷದ ಪದವಿಪೂರ್ವ ವಿದ್ಯಾರ್ಥಿಯೊಬ್ಬರು ಶುಕ್ರಾವರ ಅಕಾಲಿಕವಾಗಿ ನಿಧನರಾದರು ಎಂದು ಘೋಷಿಸಲು ಬಹಳ ದುಃಖವಾಗುತ್ತಿದೆ ಎಂದು ಗುವಾಹಟಿ ಐಐಟಿ ಪ್ರಕಟಣೆಯಲ್ಲಿ ತಿಳಿಸಿದೆ.
ಸಂಸ್ಥೆಯು ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಿದ್ದು, ಅವರು ಗುವಾಹಟಿಗೆ ಆಗಮಿಸುತ್ತಿದ್ದಾರೆ.
"ಈ ದುಃಖದ ಸಮಯದಲ್ಲಿ ಕುಟುಂಬದ ಗೌಪ್ಯತೆಯನ್ನು ಗೌರವಿಸಲು ನಾವು ಪ್ರತಿಯೊಬ್ಬರನ್ನು ವಿನಂತಿಸುತ್ತೇವೆ. ಸಂಸ್ಥೆಯು ವಿದ್ಯಾರ್ಥಿಯ ಸಾವಿಗೆ ತೀವ್ರ ಸಂತಾಪವನ್ನು ಸೂಚಿಸುತ್ತದೆ" ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


