ಛತ್ತೀಸ್‌ಗಢ: ಸೂರಜ್‌ಪುರದಲ್ಲಿ ಆನೆ ದಾಳಿಗೆ ಇಬ್ಬರು ನಾಗರಿಕರು ಬಲಿ
ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯಲ್ಲಿ ಭಾನುವಾರ ನಡೆದ ಪ್ರತ್ಯೇಕ ಆನೆ ದಾಳಿಯಲ್ಲಿ ಇಬ್ಬರು ಹಿರಿಯ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕೊರ್ಬಾ: ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯಲ್ಲಿ ಭಾನುವಾರ ನಡೆದ ಪ್ರತ್ಯೇಕ ಆನೆ ದಾಳಿಯಲ್ಲಿ ಇಬ್ಬರು ಹಿರಿಯ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರೇಮನಗರ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಳೆದೊಂದು ವಾರದಿಂದ 12 ಆನೆಗಳ ಹಿಂಡು ತಿರುಗಾಡುತ್ತಿವೆ.
ಇದನ್ನು ಓದಿ: ಮಡಿಕೇರಿ: ಕಾಡಾನೆ ದಾಳಿಗೆ ಬಡ ದಿನಗೂಲಿ ಸಾವು
ಮೊದಲ ಘಟನೆಯು ಅಭಯಪುರ್ ಗ್ರಾಮದ ಬಳಿ ಮಧ್ಯರಾತ್ರಿ 12.30 ರ ಸುಮಾರಿಗೆ ನಡೆದಿದ್ದು, ದಾಳಿಗೆ ಬಲಿಯಾದ ವ್ಯಕ್ತಿ ಮನ್ಬೋಧ್ ದೇವರು(70) ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಕಾಡಿನಲ್ಲಿರುವ ದೇವಸ್ಥಾನದಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಿ ರಾತ್ರಿ ಊಟ ಮಾಡುತ್ತಿದ್ದ ವೇಳೆ ಆನೆ ದಾಳಿ ನಡೆಸಿದೆ ಎಂದು ಸೂರಜ್‌ಪುರ ಅರಣ್ಯ ವಿಭಾಗದ ವಿಭಾಗೀಯ ಅರಣ್ಯಾಧಿಕಾರಿ ಸಂಜಯ್ ಯಾದವ್ ತಿಳಿಸಿದ್ದಾರೆ.
ಆನೆ ಹಿಂಡನ್ನು ನೋಡಿದ ಕೆಲವು ಗ್ರಾಮಸ್ಥರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ ಆನೆಗಳಲ್ಲಿ ಒಂದು ಆನೆ ಮನ್ಬೋಧ್ ಅವರನ್ನು ಹಿಡಿದು ತುಳಿದು ಸಾಯಿಸಿತು. ಹೀಗಾಗಿ ಅರಣ್ಯಕ್ಕೆ ಹೋಗದಂತೆ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಅದೇ ರೀತಿ ಜನಾರ್ದನಪುರ ಗ್ರಾಮದ ತನ್ನ ಗುಡಿಸಲಿನಲ್ಲಿ ಮಲಗಿದ್ದ ರಾಯಮತಿ ದೇವರು(70) ಎಂಬುವರ ಮೇಲೆ ಅದೇ ಆನೆ ಹಿಂಡು ದಾಳಿ ಮಾಡಿದೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಅವರು ತಿಳಿಸಿದ್ದಾರೆ.
ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


