ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ರೆಕಾರ್ಡ್: ತನಿಖೆಗಾಗಿ ಪಂಜಾಬ್ ಪೊಲೀಸರಿಂದ 3 ಮಹಿಳಾ ಸದಸ್ಯರ ಎಸ್‌ಐಟಿ ರಚನೆ
ಚಂಡೀಗಢ ವಿಶ್ವವಿದ್ಯಾನಿಲಯದ ಹಲವಾರು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳು ರೆಕಾರ್ಡ್ ಮಾಡಿದ್ದಾಳೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಮೂವರು ಮಹಿಳಾ ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಚಂಡೀಗಢ: ಚಂಡೀಗಢ ವಿಶ್ವವಿದ್ಯಾನಿಲಯದ ಹಲವಾರು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳು ರೆಕಾರ್ಡ್ ಮಾಡಿದ್ದಾಳೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಮೂವರು ಮಹಿಳಾ ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಹಿರಿಯ ಐಪಿಎಸ್ ಅಧಿಕಾರಿ ಗುರುಪ್ರೀತ್ ಕೌರ್ ದೇವ್ ಅವರ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ರಚಿಸಲಾಗಿದೆ. ತಂಡವು ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಲಿದೆ ಮತ್ತು ಇದರಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿಯನ್ನು ಬಿಡುವುದಿಲ್ಲ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಹೇಳಿದ್ದಾರೆ.
ತನಿಖೆಗಳು ಭರದಿಂದ ಸಾಗುತ್ತಿವೆ. ಈ ಸಂಬಂಧ ವಿದ್ಯಾರ್ಥಿನಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಪರಿಶೀಲಿಸದ ಯಾವುದೇ ವದಂತಿಗಳಿಗೆ ಕಿವಿಕೊಡಬೇಡಿ. ಸಮಾಜದಲ್ಲಿ ಶಾಂತಿ ನೆಲೆಸಲು ಒಗ್ಗಟ್ಟಿನಿಂದ ಶ್ರಮಿಸೋಣ. ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಡಿಜಿಪಿ ಮನವಿ ಮಾಡಿದ್ದಾರೆ.
ಹಲವಾರು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಪಂಜಾಬ್‌ನ ಮೊಹಾಲಿಯಲ್ಲಿ ಶನಿವಾರ ರಾತ್ರಿಯಿಂದ ಕ್ಯಾಂಪಸ್‌ನಲ್ಲಿ ಪ್ರತಿಭಟನೆಗಳು ನಡೆದಿದ್ದು, ಸೋಮವಾರ ಮುಂಜಾನೆಯವರೆಗೂ ಪ್ರತಿಭಟನೆಗಳು ಮುಂದುವರೆದಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


