ದೇಶ

ಎಐಸಿಸಿ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಶಶಿ ತರೂರ್: ಸೋನಿಯಾ ಗಾಂಧಿ ಪ್ರತಿಕ್ರಿಯೆ ಇದು...

ಕಾಂಗ್ರೆಸ್ ನ ಹಿರಿಯ ಮುಖಂಡ ಶಶಿ ತರೂರ್-ಸೋನಿಯಾ ಗಾಂಧಿ ಭೇಟಿ ತೀವ್ರ ಕುತೂಹಲ ಮೂಡಿಸಿತ್ತು. ಈ ಭೇಟಿಯ ವೇಳೆ ಶಶಿ ತರೂರ್ ಎಐಸಿಸಿ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ಸೋನಿಯಾ ಗಾಂಧಿ ಅವರ ಬಳಿ ವ್ಯಕ್ತಪಡಿಸಿದ್ದಾರೆ.

ಎಐಸಿಸಿ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಶಶಿ ತರೂರ್: ಸೋನಿಯಾ ಗಾಂಧಿ ಪ್ರತಿಕ್ರಿಯೆ ಇದು...
ಶಶಿ ತರೂರ್
Published On :

ನವದೆಹಲಿ: ಕಾಂಗ್ರೆಸ್ ನ ಹಿರಿಯ ಮುಖಂಡ ಶಶಿ ತರೂರ್-ಸೋನಿಯಾ ಗಾಂಧಿ ಭೇಟಿ ತೀವ್ರ ಕುತೂಹಲ ಮೂಡಿಸಿತ್ತು. ಈ ಭೇಟಿಯ ವೇಳೆ ಶಶಿ ತರೂರ್ ಎಐಸಿಸಿ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ಸೋನಿಯಾ ಗಾಂಧಿ ಅವರ ಬಳಿ ವ್ಯಕ್ತಪಡಿಸಿದ್ದಾರೆ.

ಶಶಿ ತರೂರ್ ಇಂಗಿತಕ್ಕೆ ಸೋನಿಯಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಚುನಾವಣೆಯಲ್ಲಿ ತಾವು ತಟಸ್ಥರಾಗಿ ಉಳಿಯುವುದಾಗಿ ತಿಳಿಸಿದ್ದಾರೆ.

ಚುನಾವಣೆಗೆ ಹೆಚ್ಚು ಮಂದಿ ಸ್ಪರ್ಧಿಸುವ ಐಡಿಯಾವನ್ನು ಸೋನಿಯಾ ಗಾಂಧಿ ಸ್ವಾಗತಿಸಿದ್ದು, ಅಧಿಕೃತ ಅಭ್ಯರ್ಥಿ ಇರಲಿದ್ದಾರೆ ಎಂಬ ಕಲ್ಪನೆಯನ್ನು ಹೋಗಲಾಡಿಸಿದ್ದಾರೆ. 

ಸೋನಿಯಾ ಗಾಂಧಿ ಅವರ ಪ್ರತಿಕ್ರಿಯೆ ಶಶಿ ತರೂರ್ ಅವರನ್ನು ಚುನಾವಣೆಗೆ ಸ್ಪರ್ಧಿಸುವುದಕ್ಕೆ ಉತ್ತೇಜಿಸುವಂತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಶಶಿ ತರೂರ್ ತಮ್ಮ ಉಮೇದುವಾರಿಕೆಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. 

ಶಶಿ ತರೂರ್- ಸೋನಿಯಾ ಗಾಂಧಿ ಭೇಟಿ ಹಾಗೂ ಅದರ ಊಹಾಪೋಹಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಲು ಯಾರಿಂದಲೂ ಅನುಮತಿ ಪಡೆಯಬೇಕಿಲ್ಲ. ಚುನಾವಣೆ ಮುಕ್ತ, ಪ್ರಜಾಸತ್ತಾತ್ಮಕ ಮತ್ತು ಪಾರದರ್ಶಕ ಪ್ರಕ್ರಿಯೆಯಲ್ಲಿ ನಡೆಯಲಿದೆ ಎಂದು ಹೇಳಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.