ಕೋವಿಡ್-19: ದೇಶಾದ್ಯಂತ 24 ಗಂಟೆಗಳ ಅವಧಿಯಲ್ಲಿ 4,043 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,043 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,43,089 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,043 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,43,089 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 47,379 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 06 ಜನರು ಸೇರಿ 15 ಜನರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ಈವರೆಗೆ 5,28,370 ಜನರು ಮೃತಪಟ್ಟಿದ್ದಾರೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.11ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ದೈನಂದಿನ ಪಾಸಿಟಿವಿಟಿ ದರ ಶೇ 1.37 ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 1.78 ರಷ್ಟಿದೆ. ದೇಶದಲ್ಲಿ ಈವರೆಗೆ 4,39,67,340 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 216.83 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


